ಬೆಂಗಳೂರು –
ರಾಜ್ಯದ ಸಚಿವರ ಮಕ್ಕಳು ಲೋಕಸಭಾ ಅಖಾಡ ದಲ್ಲಿ – ಸಚಿವರ ಮಕ್ಕಳಿಗೆ ಮಣೆ ಹಾಕಿದ ಕೈ ಹೈಕಮಾಂಡ್ ಹೌದು
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಕಾಂಗ್ರೇಸ್ ಪಕ್ಷದ ಮತ್ತೊಂದು ಪಟ್ಟಿ ಬಿಡುಗಡೆ ಯಾಗಿದೆ.ಈ ಒಂದು ಪಟ್ಟಿಯಲ್ಲಿ ರಾಜ್ಯ ಸಚಿವರ ಮಕ್ಕಳಿಗೆ ಕಾಂಗ್ರೇಸ್ ಪಕ್ಷದ ಹೈಕಮಾಂಡ್ ಮಣೆ ಹಾಕಿದೆ.ಹೌದು ಕರ್ನಾಟಕದಿಂದ ಲೋಕಸಭೆಗೆ ಸ್ಪರ್ಧಿಸಲಿರುವ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿಯಲ್ಲಿ ರಾಜ್ಯದ ಸಚಿವರ ಮಕ್ಕಳಿಗೆ ಮಣೆಹಾಕಲಾಗಿದೆ.
ಲೋಕಸಭಾ ಚುನಾವಣೆಗೆ ಕಾಂಗ್ರೆಸ್ 57 ಮಂದಿಗೆ ಟಿಕೆಟ್ ಘೋಷಿಸಿದೆ.ಈ ಪೈಕಿ ಕರ್ನಾಟಕದ 17 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಲಾಗಿದೆ. ಈಗಾಗಲೇ ಕಾಂಗ್ರೆಸ್ ಮೊದಲ ಪಟ್ಟಿಯಲ್ಲಿ 7 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದು,
ಇದೀಗ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಿದೆ.ಇದರೊಂದಿಗೆ ಒಟ್ಟು 24 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು, 4 ಕ್ಷೇತ್ರಗಳು ಮಾತ್ರ ಬಾಕಿ ಉಳಿದುಕೊಂಡಿವೆ.ಇದು ಒಂದು ವಿಚಾರವಾದರೆ ಇನ್ನೂ ಈ ಬಾರಿ ಕಾಂಗ್ರೇಸ್ ಪಕ್ಷವು ರಾಜ್ಯದ ಸಚಿವರ ಮಕ್ಕಳಿಗೆ ಟಿಕೆಟ್ ನ್ನು ನೀಡಿದೆ.
ಸಚಿವ ಈಶ್ವರ್ ಖಂಡ್ರೆ ಪುತ್ರ, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಗ, ಸತೀಶ್ ಜಾರಕಿಹೊಳಿ ಪುತ್ರಿ, ಸಚಿವ ರಾಮಲಿಂಗರೆಡ್ಡಿ ಪುತ್ರಿ, ಶಿವಾನಂದ ಪಾಟೀಲ್ ಪುತ್ರಿಗೆ ಲೋಕಸಭಾ ಟಿಕೆಟ್ ನೀಡಲಾಗಿದೆ. ಇನ್ನೂ, ವೆಂಟಪ್ಪ ನಾಯಕ್ ಅವರ ಪುತ್ರನಿಗೆ ಸುರಪುರ ವಿಧಾನಸಭಾ ಕ್ಷೇತ್ರದ ಟಿಕೆಟ್ ನೀಡಿದೆ.
ಯಾವ ಕ್ಷೇತ್ರದಿಂದ ಯಾರು ಸ್ಪರ್ಧೆ
ಬಾಗಲಕೋಟೆ ಲೋಕಸಭಾ ಕ್ಷೇತ್ರ : ಸಂಯುಕ್ತಾ ಪಾಟೀಲ್ ಸಚಿವ ಶಿವಾನಂದ ಪಾಟೀಲ್ ರ ಪುತ್ರಿ
ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಸೌಮ್ಯಾರೆಡ್ಡಿ ಸಚಿವ ರಾಮಲಿಂಗರೆಡ್ಡಿ ಪುತ್ರಿ
ಬೀದರ್ ಲೋಕಸಭಾ ಕ್ಷೇತ್ರ : ಸಾಗರ್ ಖಂಡ್ರೆ ಸಚಿವ ಈಶ್ವರ ಖಂಡ್ರೆ ಬೆಳಗಾವಿ ಲೋಕಸಭಾ ಕ್ಷೇತ್ರ : ಮೃಣಾಲ್ ಹೆಬ್ಬಾಳ್ಕರ್ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಚಿಕ್ಕೋಡಿ ಲೋಕಸಭಾ ಕ್ಷೇತ್ರ : ಪ್ರಿಯಾಂಕಾ ಜಾರಕಿಹೊಳಿ ಸಚಿವ ಸತೀಶ್ ಜಾರಕಿಹೊಳಿ
ಹೀಗೆ ಸಚಿವರ ಮಕ್ಕಳು ಲೋಕಸಭಾ ಚುನಾವಣಾ ಅಖಾಡಕ್ಕೆ ಇಳಿದಿದ್ದು ಏನೇನಾ ಗಲಿದೆ ಎಂಬೊಂದನ್ನು ಕಾದು ನೋಡಬೇಕಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..