ಮೈಸೂರು –
ತಪ್ಪು ಮಾಡೋ ವಿದ್ಯಾರ್ಥಿಗಳಿಂದ ಛಡಿ ಏಟಿನಿಂದ ಬಡಿಸಿಕೊಳ್ಳತ್ತಾರೆ ಶಿಕ್ಷಕ ವಿದ್ಯಾರ್ಥಿ ಗಳಿಂದ ಪೆಟ್ಟು ತಿಂದು ಪಾಠ ಹೇಳುವ ಶಿಕ್ಷಕ ಗೋಪಾಲ್ ರ ಹೊಸ ಕಲಿಕಾ ಪ್ರಯೋಗ ರಾಜ್ಯಕ್ಕೆ ಮಾದರಿ ಹೌದು
ಸಾಮಾನ್ಯವಾಗಿ ತಪ್ಪು ಮಾಡಿದ ವಿದ್ಯಾರ್ಥಿಗಳಿಗೆ ಶಿಕ್ಷೆಯನ್ನು ನೀಡಿ ಪಾಠ ಬೋಧನೆಯನ್ನು ಮಾಡೊದನ್ನು ಕೇಳಿದ್ದೇವೆ ನೋಡಿದ್ದೇವೆ ಆದರೆ ಇಲ್ಲೊಬ್ಬ ಶಿಕ್ಷಕರು ತಪ್ಪು ಮಾಡಿದ ವಿದ್ಯಾರ್ಥಿ ಗಳಿಂದಲೇ ಶಿಕ್ಷೆಯನ್ನು ತಗೆದುಕೊಂಡು ಪಾಠ ಬೋಧನೆಯನ್ನು ಮಾಡುತ್ತಿದ್ದಾರೆ ಹೌದು ಇಂತಹದೊಂದು ಹೊಸ ಪ್ರಯೋಗದ ಮೂಲಕ ರಾಜ್ಯದಲ್ಲಿಯೇ ಪಾಠ ಮಾಡುತ್ತಿದ್ದಾರೆ
ರಿಪ್ಪನ್ ಪೇಟೆಯಲ್ಲಿ ವಿದ್ಯಾರ್ಥಿಗಳನ್ನು ಶತಾಯಗತಾಯ ಕಲಿಕೆಯತ್ತ ಆಸಕ್ತಿ ತಾಳು ವಂತೆ ಮಾಡುವ ಉದ್ದೇಶದಿಂದ ಸ್ವತಃ ತಾವೇ ತಪ್ಪು ಮಾಡಿದವರಿಂದ ಛಟಿ ಏಟು ತಿನ್ನುವ ಶಿಕ್ಷಕರೊಬ್ಬರು ತಮ್ಮ ವಿಭಿನ್ನ ಮಾರ್ಗದಿಂದ ಯಶಸ್ಸನ್ನೂ ಕಂಡಿದ್ದಾರೆ.
ಸಮೀಪದ ಅಮೃತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಲಂದೂರು ಗ್ರಾಮದಲ್ಲಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಎಚ್.ಎಸ್.ಗೋಪಾಲ್ ಅವರೇ ಪಾಠ ಹೇಳಿದ ಬಳಿಕ ವಿದ್ಯಾರ್ಥಿಗಳಿಂದ ಉತ್ತರ ಪಡೆಯುತ್ತಾರೆ ತಪ್ಪು ಉತ್ತರ ನೀಡಿದ ಶಿಷ್ಯರಿಂದಲೇ ಛಡಿಯಿಂದ ಏಟು ತಿನ್ನುವುದನ್ನು ರೂಢಿ ಮಾಡಿದ್ದಾರೆ.
ಶಿಕ್ಷಕರಿಗೇ ಹೊಡೆಯಬೇಕಲ್ಲಎಂಬ ಕಾರಣದಿಂದ ವಿದ್ಯಾರ್ಥಿಗಳು ಕಲಿಕೆಯಲ್ಲಿ ಆಸಕ್ತಿ ತಾಳುತ್ತಿ ದ್ದಾರೆ. ಈ ಮಾದರಿ ಯಶಸ್ವಿಯಾಗಿದೆ ಎಂದು ಈಗ ಕಲಿಯುತ್ತಿರುವ ವಿದ್ಯಾರ್ಥಿಗಳ ಪಾಲಕರು ಮತ್ತು ಈ ಹಿಂದೆ ಇಲ್ಲಿ ಕಲಿತು ಹೋಗಿರುವ ಹಳೆ ವಿದ್ಯಾರ್ಥಿಗಳು ಹೇಳುತ್ತಾರೆ’ಪ್ರತಿಫಲ ಸಿಗಬೇ ಕಾದರೆ ಹೊಸ ಪ್ರಯೋಗಗಳಿಗೆ ಅಣಿಯಾಗ ಲೇಬೇಕು.
ಆ ನಿಟ್ಟಿನಲ್ಲಿ ನಾನು ತಪ್ಪು ಉತ್ತರ ನೀಡಿದ ವಿದ್ಯಾರ್ಥಿಯಿಂದಲೇ ಪೆಟ್ಟು ತಿನ್ನುವ ಪರಿಪಾಠ ಬೆಳೆಸಿಕೊಂಡೆ. ಶಿಕ್ಷಕರನ್ನು ದಂಡಿಸುವುದು ಹೇಗೆ ಎಂಬ ಅಳುಕಿನಿಂದಲಾದರೂ ಅವರು ಕಲಿಕೆ ಯಲ್ಲಿ ಹೆಚ್ಚು ಆಸಕ್ತಿ ತೋರಿ ಕ್ರಿಯಾಶೀಲರಾಗಲಿ ಎಂಬ ಭಾವನೆ ನನ್ನದು.ಈ ಪ್ರಯೋಗ ಯಶಸ್ವಿ ಯಾಗಿದೆ’ ಎಂದು ಶಿಕ್ಷಕ ಎಚ್.ಎಸ್. ಗೋಪಾಲ್ ತಿಳಿಸಿದರು.
‘ಶಿಕ್ಷಕ ಎಚ್.ಎಸ್. ಗೋಪಾಲ್ ಅವರು ವಿದ್ಯಾರ್ಥಿಗಳನ್ನು ಬುದ್ಧಿವಂತರಾಗಿಸಲು ನಡೆಸಿರುವ ವಿನೂತನ ಪ್ರಯೋಗ ಗಾಢ ಪರಿಣಾಮ ಬೀರಿದೆ. ಕಲಿಕಾ ಸಾಮಗ್ರಿಗಳ ಮೂಲಕ ಮಕ್ಕಳಿಗೆ ಪಠ್ಯವನ್ನು ಸುಲಭವಾಗಿ ಅರ್ಥವಾಗುವಂತೆ ಹೇಳಿಕೊಡುತ್ತಿದ್ದಾರೆ.
ಪಾಠದ ಜತೆಗೆ ಸಂಸ್ಕೃತಿ, ಸಂಸ್ಕಾರವನ್ನೂ ಕಲಿಸುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳ ನಡವಳಿಕೆಯಲ್ಲಿ ಸಾಕಷ್ಟು ಬದಲಾವಣೆ ಕಂಡುಬಂದಿದೆ’ ಎಂದು ಪಾಲಕರು ತಿಳಿಸಿದ್ದಾರೆ.
‘ಶಿಕ್ಷಕ ಗೋಪಾಲ್ ಅನುಸರಿಸುತ್ತಿರುವ ವಿನೂತನ ಕಲಿಕಾ ಮಾದರಿಯ ಕಾರಣಕ್ಕೆ ಮುಚ್ಚುವ ಹಂತಕ್ಕೆ ತಲುಪಿದ್ದ ಶಾಲೆ ಇನ್ನೂ ಮುಂದುವರಿದಿದೆ.
ಜೂನ್‌ನಲ್ಲಿ ಶಿಕ್ಷಕ ಗೋಪಾಲ್ ನಿವೃತ್ತಿಯಾಗಲಿ ದ್ದಾರೆ ವಿದ್ಯಾರ್ಥಿಗಳ ಉತ್ತಮ ಭವಿಷ್ಯ ರೂಪಿ ಸುವ ನಿಟ್ಟಿನಲ್ಲಿ ಎಲೆಮರೆಯ ಕಾಯಿಯಂತೆ ಕಾರ್ಯ ನಿರ್ವಹಿಸುವ ಇಂತಹ ಶಿಕ್ಷಕರನ್ನು ಸರ್ಕಾರ, ಸಂಘ- ಸಂಸ್ಥೆಗಳು ಗುರುತಿಸಿ ಗೌರವಿ ಸಿದಲ್ಲಿ ಅವರ ಸೇವಾಕಾರ್ಯಕ್ಕೆ ಸಾರ್ಥಕತೆ ಸಿಗಲಿದೆ’ ಎಂಬ ಮಾತುಗಳು ಕೂಡಾ ಪೋಷಕರಿಂದ ಕೇಳಿ ಬರುತ್ತಿವೆ
ಸುದ್ದಿ ಸಂತೆ ನ್ಯೂಸ್ ರಿಪ್ಪನ್ ಪೇಟೆ…..