ಹುಬ್ಬಳ್ಳಿ –
ಏಪ್ರೀಲ್ 2 ರಂದು ಪೊಲೀಸ್ ಧ್ವಜ ದಿನಾಚರಣೆ ಸಮಾರಂಭಕ್ಕೆ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯದಿಂದ ಸರ್ವರಿಗೂ ಸ್ವಾಗತ ಕೋರಿದ್ದಾರೆ ಆಯುಕ್ತರಾದ ರೇಣುಕಾ ಸುಕುಮಾರ ಹೌದು
ಏಪ್ರೀಲ್ 2 ರಂದು ರಾಜ್ಯಾಧ್ಯಂತ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.ಈ ಒಂದು ಕಾರ್ಯಕ್ರಮವು ಹುಬ್ಬಳ್ಳಿಯಲ್ಲೂ ಪೊಲೀಸ್ ಆಯುಕ್ತಾಲಯದಿಂದ ನಡೆಯಲಿದೆ. ಹೌದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತಾಲಯದಿಂದ ಪೊಲೀಸ್ ಧ್ವಜ ದಿನಾಚರಣೆಯನ್ನು ಏಪ್ರೀಲ್ 2ರಂದು ಬೆಳಿಗ್ಗೆ 8 ಗಂಟೆಗೆ ಗೋಕುಲ ರಸ್ತೆಯ ಹೊಸ ಸಶಸ್ತ್ರ ಮೀಸಲು ಪಡೆಯ ಕವಾಯತು ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ನಿವೃತ್ತ ಪೊಲೀಸ್ ಸಬ್ ಇನ್ಸಪೆಕ್ಟರ್ ಎಸ್.ಎಲ್. ಕಸ್ತೂರಿ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿ ಸುವರು.ಹುಬ್ಬಳ್ಳಿ ಧಾರವಾಡ ನಗರದ ನಿವೃತ್ತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಪಾಲ್ಗೊಳ್ಳುವರು ಎಂದು ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರ್ ಅವರು ಪ್ರಕಟಣೆಯಲ್ಲಿ ಮಾಹಿತಿ ನೀಡಿ ಸರ್ವರಿಗೂ ಸ್ವಾಗತವನ್ನು ಕೋರಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..