ಬೆಂಗಳೂರು –
ಪ್ರೌಢಶಾಲೆ ಶಿಕ್ಷಕರ 15 ದಿನ ರಜೆ ಕಡಿತ ಮಾಡಲಾಗಿದ್ದು ಇಂದಿನಿಂದಲೇ ವಿಶೇಷ ತರಗತಿ ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತರಾತುರಿಯಲ್ಲಿ ನಿರ್ದೇಶನ ನೀಡಿದೆ. ಇದಕ್ಕೆ ಶಿಕ್ಷಕರ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ಜೂನ್ -ಜುಲೈನಲ್ಲಿ ನಡೆಯಲಿರುವ ಎಸ್‌ಎಸ್‌ಎಲ್ಸಿ ಪರೀಕ್ಷೆ -2ಗೆ ನೋಂದಾಯಿಸಿದ ವಿದ್ಯಾರ್ಥಿಗಳಿಗೆ ಮೇ 15 ರಿಂದ ಜೂನ್ 5ರವರೆಗೆ ಆಯಾ ಪ್ರೌಢಶಾಲೆಗಳಲ್ಲಿ ವಿಶೇಷ ತರಗತಿಗಳನ್ನು ನಡೆಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ನಿರ್ದೇಶನ ನೀಡಿದೆ.
ಈ ಬಾರಿ ಎಸ್‌ಎಸ್‌ಎಲ್ ಸಿ ಪರೀಕ್ಷಾ ಪಲಿತಾಂಶ ಭಾರಿ ಕುಸಿತ ಕಂಡ ಹಿನ್ನೆಲೆಯಲ್ಲಿ ಸರ್ಕಾರ ಹೊಸ ಪ್ರಯೋಗಕ್ಕೆ ಮುಂದಾಗಿದೆ. ಮೇ 29 ರವರೆಗೆ ಬೇಸಿಗೆ ರಜೆ ಇದ್ದರೂ ಮೇ 15 ರಿಂದಲೇ ಶಾಲೆಗೆ ಬರುವಂತೆ ತಿಳಿಸಿದೆ.ಇದಕ್ಕೆ ಶಿಕ್ಷಕರ ವಲಯದಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..