ಮೈಸೂರು –
ಪಠ್ಯಪುಸ್ತಕ ಪರಿಷ್ಕ್ರರಣೆ ಕುರಿತಂತೆ ಶಿಕ್ಷಣ ಸಚಿವರು ಹೇಳಿದ್ದೇನು ಗೊತ್ತಾ – ಎಲ್ಲಾ ಗೊಂದಲಗಳಿಗೆ ತೆರೆ ಎಳೆದ ಶಿಕ್ಷಣ ಸಚಿವರು
ಶೈಕ್ಷಣಿಕ ವರ್ಷ ಆರಂಭವಾಗುತ್ತಿದ್ದಂತೆ ಕೆಲ ವಿಚಾರಗಳ ಕುರಿತಂತೆ ಗೊಂದಲಗಳು ಪ್ರಶ್ನೆಗಳು ಹುಟ್ಟಿಕೊಂಡಿದ್ದು ಇದರಲ್ಲಿ ಪಠ್ಯಪುಸ್ತಕಗಳು ಈ ಬಾರಿ ಪರಿಷ್ಕ್ರರಣೆಯಾಗುತ್ತವೆಯಾ ಈ ಒಂದು ಪ್ರಶ್ನೆಗಳಿಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.ಮೈಸೂರಿನಲ್ಲಿ ಮಾತನಾಡಿದ ಅವರು
ಈ ಒಂದು ವರ್ಷ ಪುಸ್ತಕ ಪರಿಷ್ಕರಣೆ ಇಲ್ಲ ಎನ್ನುವ ಮೂಲಕ ಗೊಂದಲಗಳಿಗೆ ತೆರೆ ಏಳೆದಿದ್ದಾರೆ. ಈ ಶೈಕ್ಷಣಿಕ ವರ್ಷದಲ್ಲಿ ಶಾಲಾ ಪಠ್ಯಪುಸ್ತಕದ ಪರಿಷ್ಕರಣೆ ಇಲ್ಲ ಕೆಲವು ವ್ಯಾಕರಣ ಪದಗಳನ್ನಷ್ಟೇ ಬದಲಾವಣೆ ಮಾಡಲಾಗಿದೆ.ಅದು ಬಿಟ್ಟರೆ ಯಾವುದೇ ಬದಲಾವಣೆ ಮಾಡುವುದಿಲ್ಲ.
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ 500 ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸುತ್ತೇವೆ. ಮುಂದಿನ 3 ವರ್ಷಗಳಲ್ಲಿ 3 ಸಾವಿರ ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸುವ ಗುರಿ ಹೊಂದಲಾಗಿದೆ. ಮುಂದಿನ ದಿನಗಳಲ್ಲಿ ಸಿಎಸ್‌ಆರ್ ಅನುದಾನದಡಿ ಪಬ್ಲಿಕ್ ಶಾಲೆ ಆರಂಭಿಸಲಿದ್ದೇವೆ. ರಾಜ್ಯದಲ್ಲಿ 6 ಸಾವಿರ ಗ್ರಾಮ ಪಂಚಾಯಿತಿಗಳಿವೆ.
2 ಪಂಚಾಯಿತಿಗೆ ಒಂದರಂತೆ 1 ಕರ್ನಾಟಕ ಪಬ್ಲಿಕ್ ಶಾಲೆ ಆರಂಭಿಸಲಾಗುವುದು.ಕರ್ನಾಟಕ ಪಬ್ಲಿಕ್ ಶಾಲೆಗಳ ಆರಂಭಕ್ಕೆ 2 ಸಾವಿರ ಕೋಟಿ ಅನುದಾನ ಬೇಕಾಗುತ್ತದೆ. ಸಿಎಸ್‌ಆರ್ ಅನುದಾ ನದಡಿ 2500 ಸಾವಿರ ಕೋಟಿ ಹಣವನ್ನು ಕೊಡಿ ಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕು ಮಾರ್ ಹೇಳಿದ್ದಾರೆ.
ಎಲ್ಲಾ ಸೌಕರ್ಯದೊಂದಿಗೆ ನಮ್ಮ ಮಕ್ಕಳಿಗೆ ಉತ್ತಮ ಗುಣಮಟ್ಟದ ಶಿಕ್ಷಣ ಕೊಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದರು.ಇನ್ನೂ ಶೂ ಕೊಡ್ತೀವಿ, ಸೈಕಲ್ ವಿತರಣೆ ಮಾಡುವ ಕುರಿತಂತೆ ತೀರ್ಮಾನವಾಗಿಲ್ಲವೆಂದರು. ಮೇ 29 ದಿಂದ ಶಾಲೆಗಳು ಪ್ರಾರಂಭವಾಗಲಿದ್ದು ಶಿಕ್ಷಕರು ಮಕ್ಕಳ ಸ್ವಾಗತಕ್ಕೆ ಸಿದ್ಧರಾಗಿದ್ದಾರೆ.
ಈಗಾಗಲೇ ಶೇ. 95 ಸಮವಸ್ತ್ರ ಮತ್ತು ಪಠ್ಯ ಪುಸ್ತಕ ವಿತರಣೆ ಮಾಡಲಾಗಿದೆ. ಸಮವಸ್ತ್ರದಲ್ಲಿ ಗುಣಮಟ್ಟದಲ್ಲಿ ಕೊರತೆ ಇದ್ದರೆ ದೂರು ಕೊಡಬ ಹುದು ಎಂದರು.ಎಸ್ ಡಿಎಂಸಿ ಅಧ್ಯಕ್ಷರಿಗೆ ಜವಾಬ್ದಾರಿ ಕೊಟ್ಟಿರುವುದರಿಂದ 15 ದಿನಗಳ ಒಳಗೆ ಶೂ ಖರೀದಿಸಿ ನೀಡುತ್ತಾರೆ. ಶೈಕ್ಷಣಿಕ ಸಾಲಿನಲ್ಲಿ ಸೈಕಲ್ ವಿತರಿಸುವ ಬಗ್ಗೆ ತೀರ್ಮಾ ನವಾಗಿಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಎಲ್ಲಾ ಮಕ್ಕಳಿಗೆ ವಾರದಲ್ಲಿ 2 ಬಾರಿ ಮೊಟ್ಟೆ, ರಾಗಿ ಮಾಲ್ಟ್ ನೀಡಿ ಪೌಷ್ಟಿಕತೆ ಹೆಚ್ಚಿಸಲಾಗುತ್ತಿದೆ ಎಂದರು.
ಸುದ್ದಿ ಸಂತೆ ನ್ಯೂಸ್ ಮೈಸೂರು…..