ಬೆಂಗಳೂರು –
ಜುಲೈ 1 ರಿಂದಲೇ 7ನೇ ವೇತನ ಆಯೋಗ ಜಾರಿ ಜಾರಿಗೆ ತರಲು ತೆರೆ ಮರೆಯಲ್ಲಿ ರಾಜ್ಯ ಸರ್ಕಾರ ಸಿದ್ದತೆ….ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್
ಕೊನೆಗೂ ರಾಜ್ಯ ಸರ್ಕಾರ 7ನೇ ವೇತನ ಆಯೋಗದ ವರದಿಯನ್ನು ಜಾರಿಗೆ ತರಲು ಮುಂದಾಗಿದೆ.ಹೌದು ಈಗಾಗಲೇ ಈ ಒಂದು ಕುರಿತಂತೆ ಆಯೋಗದ ಅಧ್ಯಕ್ಷರು ರಾಜ್ಯ ಸರ್ಕಾರಕ್ಕೆ ವರದಿಯನ್ನು ಸಲ್ಲಿಕೆ ಮಾಡಿದ್ದು ವರದಿ ನಿರೀಕ್ಷೆಯಲ್ಲಿದ್ದ ರಾಜ್ಯದ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುಡ್ ನ್ಯೂಸ್ ನೀಡುತ್ತಿದ್ದಾರೆ.
ಜುಲೈ 1ರಿಂದ 7ನೇ ವೇತನ ಆಯೋಗದ ವರದಿ ಜಾರಿಗೆ ತರಲು ತೆರೆ ಮರೆಯಲ್ಲಿ ಸಿದ್ಧತೆಯನ್ನು ಮಾಡಿಕೊಳ್ಳುತ್ತಿದ್ದಾರೆ.ಇದರೊಂದಿಗೆ ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿ ಸುದ್ದಿ ನೀಡಲು ಮುಂದಾಗಿದೆ ಎಂಬ ಮಾತುಗಳು ಆಡಳಿತ ಯಂತ್ರದ ಪಡಶಾಲೆಯಲ್ಲಿ ಕೇಳಿ ಬರುತ್ತಿವೆ
7ನೇ ವೇತನ ಆಯೋಗ ವರದಿ ಜಾರಿಗೆ ರಾಜ್ಯ ಸರ್ಕಾರವು ಸಿದ್ದವಾಗಿದ್ದು ವೇತನ ಪರಿಷ್ಕರಣೆ ಸಹಿತ ಹಲವು ಸವಲತ್ತುಗಳನ್ನು ನೀಡುವ ಸರಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್ ರಾವ್ ನೇತೃತ್ವದ ಸಮಿತಿ ನೀಡಿರುವ ಶಿಫಾರಸುಗಳನ್ನು ಅನುಷ್ಠಾನಿಸಲು ಮುಂದಾಗಿದೆ
ಇನ್ನೂ ರಾಜ್ಯದ ಸಮಸ್ತ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ರಚಿಸಿದ್ದ ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜುಲೈ 1ರಿಂದ ಜಾರಿಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು ನಾಳೆ ಅಂದರೆ ಜೂನ್ 13 ರಂದು ನಡೆಯುವ ಸಂಪುಟ ಸಭೆಯಲ್ಲಿ ಈ ಕುರಿತು ಚರ್ಚಿಸಿ ಜುಲೈ 1ರಿಂದ ಅನ್ವಯವಾಗುವಂತೆ ಪರಿಷ್ಕೃತ ವೇತನ ನೀಡಲು ಕ್ರಮಕೈಗೊಳ್ಳಲಾಗು ತ್ತದೆ ಎಂದು ಮೂಲಗಳು ಹೇಳಿವೆ.
ಇನ್ನೂ ವೇತನ ಪರಿಷ್ಕರಣೆ ಕುರಿತು ಅಧ್ಯಯನ ಮಾಡಿ ವರದಿ ಸಲ್ಲಿಸಲು ನಿವೃತ್ತ ಮುಖ್ಯಕಾರ್ಯ ದರ್ಶಿ ಕೆ.ಸುಧಾಕರ್ ರಾವ್ ಅಧ್ಯಕ್ಷತೆಯಲ್ಲಿ 2022ರ ನವೆಂಬರ್ 19ರಂದು ಆಯೋಗ ರಚಿಸಲಾಗಿತ್ತು.ಆರು ತಿಂಗಳು ನೀಡಿದ್ದ ಅವಧಿ ಯನ್ನು ಎರಡು ಬಾರಿ ವಿಸ್ತರಿಸಿದ ನಂತರ ಈ ಮಾರ್ಚ್ 16ರಂದು ಆಯೋಗವು ಸರ್ಕಾರಕ್ಕೆ ವರದಿ ಸಲ್ಲಿಸಿತ್ತು.
ವರದಿ ಸಲ್ಲಿಕೆಯಾದ ದಿನದಿಂದಲೇ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿಯಾ ಗಿತ್ತು ಹಾಗಾಗಿ ವೇತನ ಪರಿಷ್ಕರಣೆ ಕುರಿತು ಸರ್ಕಾರ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿರಲಿಲ್ಲ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..