ಬೆಂಗಳೂರು –
ಲೋಕಸಭಾ ಚುನಾವಣೆ ಪ್ರಕ್ರಿಯೆ ನೀತಿ ಸಂಹಿತೆ ಮುಗಿಯುತ್ತಿದ್ದಂತೆ ಇತ್ತ ರಾಜ್ಯ ಸರ್ಕಾರ ಆಡಳಿತ ಯಂತ್ರದ ಕಾರ್ಯವನ್ನು ಚುರುಕುಗೊಳಿಸಿದ್ದು ಮತ್ತೆ ವರ್ಗಾವಣೆ ಪ್ರಕ್ರಿಯೆ ಆರಂಭ ಮಾಡಿದೆ ಹೌದು KAS ಅಧಿಕಾರಿಗಳ ವರ್ಗಾವಣೆ ಯನ್ನು ಮಾಡಲಾಗಿದೆ
ಇದರೊಂದಿಗೆ ರಾಜ್ಯ ಸರ್ಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು ರಾಜ್ಯದ ಬೇರೆ ಬೇರೆ ಕಡೆಗಳಲ್ಲಿ ಅಧಿಕಾರವನ್ನು ಮಾಡುತ್ತಿ ರುವ ಕೆ.ಎ.ಎಸ್ ಅಧಿಕಾರಿಗಳನ್ನು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ವರ್ಗಾವಣೆ ಯನ್ನು ಮಾಡಲಾಗಿದೆ
ಹಾಗೂ ಮುಂದಿನ ಆದೇಶದವರೆಗೆ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಹುದ್ದೆಗಳಿಗೆ ವರ್ಗಾಯಿಸಿ ಸ್ಥಳನಿಯುಕ್ತಿಗೊಳಿಸಿ ಆದೇಶಿಸಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು….






















