ದಾವಣಗೆರೆ –
ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸ್ ಪೇದೆ – 2 ಸಾವಿರ ರೂಪಾಯಿ ತಗೆದುಕೊಳ್ಳುವಾಗ ಲಾಕ್ ಲಂಚವನ್ನು ಸ್ವೀಕಾರ ಮಾಡುವಾಗ ಪೊಲೀಸ್ ಪೇದೆಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ದಾವಣಗೆರೆಯಲ್ಲಿ ನಡೆದಿದೆ.ಹೌದು ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿ ಕೋರ್ಟ್ ನಿಂದ ವಾರೆಂಟ್ ಹೊರಡಿಸುವಂತೆ ಮಾಡಿಸಿ ಅದನ್ನು ಜಾರಿ ಮಾಡಲು ಲಂಚ ಸ್ವೀಕರಿಸಿದ ಆರೋಪ ದಲ್ಲಿ ಪೊಲೀಸ್ ಪೇದೆಯೊಬ್ಬರನ್ನು ಲೋಕಾ ಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಲ್ಲಿನ ಸರಸ್ವತಿ ನಗರದ ನಿವೃತ್ತ ಶಿಕ್ಷಕ ಲಕ್ಕಪ್ಪ ಎಂಬವರು ಸೈಯದ್ ತ್ವಾಹಿರುದ್ದೀನ್ ಎಂಬವರ ವಿರುದ್ದ ಸಿವಿಲ್ ನ್ಯಾಯಾಲಯದಲ್ಲಿ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು.ಈ ಸಂಬಂಧ ನ್ಯಾಯಾಲಯದಿಂದ ವಾರೆಂಟ್ ಹೊರಡಿಸು ವಂತೆ ಮಾಡಿಸಿ ಅದನ್ನು ಜಾರಿ ಮಾಡಲು ಪೊಲೀಸ್ ಸಿಬ್ಬಂದಿ ಹನುಮಂತಪ್ಪ 2 ಸಾವಿರ ರೂ ಲಂಚಕ್ಕೆ ಬೇಡಿಕೆ ಇಟ್ಟಿದ್ದರು
ಈ ಒಂದು ಕುರಿತಂತೆ ಲಕ್ಕಪ್ಪ ಲೋಕಾಯುಕ್ತಕ್ಕೆ ದೂರು ದಾಖಲಿಸಿದ್ದರು ಆರೋಪಿ ಪೊಲೀಸ್ ಹನುಮಂತಪ್ಪ 2 ಸಾವಿರ ರೂ. ಲಂಚದ ಹಣ ವನ್ನು ಫೋನ್ ಪೇ ಮಾಡಿಸಿಕೊಂಡು ಸ್ವೀಕರಿಸಿದ ವೇಳೆ ಲೋಕಾಯುಕ್ತ ಪೊಲೀಸರು ಟ್ರ್ಯಾಪ್ ಕಾರ್ಯಚರಣೆ ಮಾಡಿದ್ದಾರೆ.ಹನುಮಂತಪ್ಪರನ್ನು ವಶಕ್ಕೆ ಪಡೆದಿರುವ ಲೋಕಾ ಟೀಮ್ ತನಿಖೆ ಯನ್ನು ಕೈಗೊಂಡಿದ್ದಾರೆ
ಸುದ್ದಿ ಸಂತೆ ನ್ಯೂಸ್ ದಾವಣಗೆರೆ…..