This is the title of the web page
This is the title of the web page

Live Stream

[ytplayer id=’1198′]

October 2024
T F S S M T W
 12
3456789
10111213141516
17181920212223
24252627282930
31  

| Latest Version 8.0.1 |

State News

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನೂ ನೆನಪು ಮಾತ್ರ – ಅಚ್ಚ ಕನ್ನಡದ ಖ್ಯಾತ ನಿರೂಪಕಿಯಾಗಿದ್ದ ಅಪರ್ಣಾ ಸಾವಿಗೆ ಕಂಬನಿ ಮಿಡಿದ ನಾಡಿನ ಜನತೆ…..

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನೂ ನೆನಪು ಮಾತ್ರ – ಅಚ್ಚ ಕನ್ನಡದ ಖ್ಯಾತ ನಿರೂಪಕಿಯಾಗಿದ್ದ ಅಪರ್ಣಾ ಸಾವಿಗೆ ಕಂಬನಿ ಮಿಡಿದ ನಾಡಿನ ಜನತೆ…..
WhatsApp Group Join Now
Telegram Group Join Now

ಬೆಂಗಳೂರು

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನೂ ನೆನಪು ಮಾತ್ರ – ಅಚ್ಚ ಕನ್ನಡದ ಖ್ಯಾತ ನಿರೂಪಕಿಯಾಗಿದ್ದ ಅಪರ್ಣಾ ಸಾವಿಗೆ ಕಂಬನಿ ಮಿಡಿದ ನಾಡಿನ ಜನತೆ

ಹೌದು ಅಚ್ಚ ಕನ್ನಡದೊಂದಿಗೆ ಯಾವುದೇ ಕಾರ್ಯ ಕ್ರಮದಲ್ಲಿ ನಿರೂಪಣೆಯ ಮೂಲಕ ನಾಡಿನ ಜನರ ಮನೆ ಮಾತಾಗಿದ್ದ ಅಪರ್ಣಾ ಸಾವಿಗೀಡಾಗಿದ್ದಾರೆ.ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನೆಗದ್ದ ಖ್ಯಾತ ನಿರೂಪಕಿ ಅಪರ್ಣ ನಿಧನರಾಗಿದ್ದಾರೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣ ಬೆಂಗಳೂರಿನ ನಿವಾಸದಲ್ಲಿ ನಿಧನರಾಗಿದ್ದಾರೆ.

ಬನಶಂಕರಿ ಸೆಕೆಂಡ್ ಸ್ಟೇಜ್‌ನಲ್ಲಿರುವ ನಿವಾಸದಲ್ಲಿ ಕೊನೆಯುಸಿರೆಳಿದ್ದಾರೆ.ಅಪರ್ಣಾ ಸಾವು ಕನ್ನಡಗರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಸಿನಿಮಾ, ಟಿವಿ,ಸಾಹಿತ್ಯ ಲೋಕ ಸೇರಿದಂತೆ ಹಲವು ದಿಗ್ಗಜರು ಅಪರ್ಣಾ ಸಾವಿನ ಸುದ್ದಿಗೆ ಆಘಾತ ವ್ಯಕ್ತಪಡಿಸಿದ್ದಾರೆ 1984 ರಲ್ಲಿ ತೆರೆಕಂಡ ಪುಟ್ಟಣ್ಣ ಕಣಗಾಲ್ ರ ಮಸಣದ ಹೂವು ಚಿತ್ರದಿಂದ ಬೆಳಕಿಗೆ ಬಂದ ಅಪರ್ಣಾ ನಂತರ ಇನ್ಸ್‌ಪೆಕ್ಟರ್ ವಿಕ್ರಮ್ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಸಿ ಸೈ ಎನಿಸಿಕೊಂಡಿದ್ದಾರೆ.

ಸಿನಿಮಾಗಿಂತ ನಿರೂಪಕಿಯಾಗಿ ಅಪರ್ಣಾ ಎಲ್ಲರ ಮನಗೆದ್ದಿದ್ದರು. ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡುವ ಮೂಲಕ ಭಾರಿ ಜನಪ್ರಿಯತೆ ಪಡೆದುಕೊಂಡಿ ದ್ದರು.90 ರ ದಶಕದಲ್ಲಿ ಚಂದನ ವಾಹಿನಿಯಲ್ಲಿ ಮೂಡಿ ಬಂದ ಹಲವು ಕಾರ್ಯಕ್ರಮಗಳನ್ನು ನಿರೂಪಿಸಿದರು. ನಂತರ ಭಾರತ ಸರ್ಕಾರದ ವಿವಿಧ ಕಾರ್ಯಕ್ರಮದ ನಿರೂಪಣೆ, ರೇಡಿಯೋ ಜಾಕಿಯಾಗಿ ಕೂಡ ಕಾರ್ಯ ನಿರ್ವಹಿಸಿದ್ದರು.

1998 ರಲ್ಲಿ ನಡೆದ ದೀಪಾವಳಿ ಕಾರ್ಯಕ್ರವೊಂದನ್ನು ಎಂಟು ಗಂಟೆಗಳ ನಿರೂಪಣೆ ಮಾಡಿ ದಾಖಲೆ ಬರೆದಿದ್ದ ರು.2013 ರಲ್ಲಿ ಬಿಗ್ ಬಾಸ್ ಕನ್ನಡದ ಮೊದಲ ಸೀಸನ್ ನಲ್ಲಿ ಭಾಗವಹಿಸಿದ್ದ ಅಪರ್ಣಾ ರಿಯಾಲಿಟಿ ಶೋಗಳ ಲ್ಲೂ ಸೈ ಎನಿಸಿಕೊಂಡಿದ್ರು. ಇನ್ನು 2015 ರಲ್ಲಿ ಸೃಜನ್ ಲೋಕೇಶ್ ನೇತೃತ್ವದಲ್ಲಿ ಆರಂಭವಾದ `ಮಜಾ ಟಾಕೀಸ್’ ಕಾರ್ಯಕ್ರಮದಲ್ಲಿ ವರಲಕ್ಷ್ಮಿ ಪಾತ್ರ ಮಾಡಿ ಹಾಸ್ಯ ನಟಿಯಾಗಿಯೂ ಜನರ ಮನಗೆದ್ದಿದ್ದರು.

ಬಹುಮುಖ ಪ್ರತಿಭೆಯ ಅಪರ್ಣಾ ವಿವಿಧ ಪತ್ರಿಕೆ ಗಳಲ್ಲಿ ಅಂಕಣ ಬರೆಯುವ ಮೂಲಕ ಓದುಗರಿಗೂ ಹತ್ತಿರವಾ ಗಿದ್ದರು.ಮೊದಲ ಮದುವೆಯಿಂದ ವಿಚ್ಚೇದನ ಪಡೆದಿದ್ದ ಅಪರ್ಣಾ, ಖ್ಯಾತ ಲೇಖಕ ನಾಗರಾಜ ವಸ್ತಾರೆ ವಹಿಸಿದ್ದ ನ್ನು ನೆನಪಿಸಿಕೊಳ್ಳಬಹುದು.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk