ಬೆಂಗಳೂರು –
PSI ಪರಶುರಾಮ್ ಸಾವು ಪ್ರಕರಣವನ್ನು CID ತನಿಖೆಗೆ ವಹಿಸಿದ ರಾಜ್ಯ ಸರ್ಕಾರ – ಶಾಸಕ ಚೆನ್ನಾರೆಡ್ಡಿ ಮತ್ತು ಮಗನ ಮೇಲೆ ದೂರು ದಾಖಲು….
ಪಿಎಸ್ಐ ಪರಶುರಾಮ್ ಸಾವು ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶ ವನ್ನು ಮಾಡಿದೆ.ಹೌದು ಯಾದಗಿರಿಯ ಸೈಬರ್ ಠಾಣೆಯಲ್ಲಿ ಪಿಎಸ್‌ಐ ಪರಶುರಾಮ್ ನಿನ್ನೆ ಸಂಜೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದರು. ಸಾವಿನ ನಂತರ ಹಲವು ಆರೋಪಗಳು ಕುಟುಂಬದವರಿಂದ ಕೇಳಿ ಬಂದಿದ್ದವು
ಇದೇಲ್ಲದರ ನಡುವೆ ಈ ಒಂದು ಪ್ರಕರಣವನ್ನು ರಾಜ್ಯ ಸರ್ಕಾರವು ಸಿಐಡಿ ತನಿಖೆಗೆ ವಹಿಸಿ ಆದೇಶಿಸಿದೆ.ಹೌದು ವರ್ಗಾವಣೆಗಾಗಿ ಲಂಚದ ಬೇಡಿಕೆ ಇಟ್ಟು ಪಿಎಸ್‌ಐ ಪರಶುರಾಮ್ ಅವರನ್ನ ಬಲಿ ಪಡೆದುಕೊಂಡಿದೆ ಅಂತಾ ಕುಟುಂಬದವರು ಆರೋಪವನ್ನು ಮಾಡಿದ್ದಾರೆ.ಒತ್ತಡ, ಮಾನಸಿಕ ಕಿರುಕುಳದಿಂದ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಸಾವಿಗೆ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಮತ್ತು ಅವರ ಪುತ್ರ ಸನ್ನಿಗೌಡ ಕಾರಣ ಎಂದು ಅವರ ಪತ್ನಿ ಮತ್ತು ಕುಟುಂಬಸ್ಥರು ಗಂಭೀರ ಆರೋಪ ಮಾಡಿ
ಶಾಸಕ ಮತ್ತು ಅವರ ಪುತ್ರನ ಮೇಲೆ ದೂರನ್ನು ದಾಖಲು ಮಾಡಿದ್ದಾರೆ.ಪ್ರಾಮಾಣಿಕ, ದಕ್ಷ ಅಧಿಕಾರಿಗಳಿಗೆ ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದಲ್ಲಿ ಉಳಿಗಾಲವಿಲ್ಲದಂತಾಗಿದ್ದು, ಈ ಕೂಡಲೇ ಶಾಸಕ ಚೆನ್ನಾರೆಡ್ಡಿ ಅವರಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಪಡೆಯಬೇಕು ಮತ್ತು ಈ ಪ್ರಕರಣ ವನ್ನ ಸಿಬಿಐ ತನಿಖೆಗೆ ವಹಿಸಬೇಕು ಎಂದು ಸಿಎಂ ಸಿದ್ಧರಾಮಯ್ಯ ಹಾಗು ಡಿಸಿಎಂ ಡಿಕೆ ಶಿವಕು ಮಾರ್ ಅವರನ್ನು ಮೃತ ಪೊಲೀಸ್ ಅಧಿಕಾರಿಯ ಕುಟುಂಬದವರು ಒತ್ತಾಯಿಸಿದ್ದಾರೆ.
ಇನ್ನೂ ಇದೇಲ್ಲದರ ನಡುವೆ ಈ ಒಂದು ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿ ಆದೇಶವನ್ನು ಮಾಡಿದ್ದು ಇತ್ತ ದೂರು ದಾಖಲಾಗುತ್ತಿದ್ದಂತೆ ಶಾಸಕ ಚೆನ್ನಾರೆಡ್ಡಿ ಮತ್ತು ಅವರ ಪುತ್ರ ಸನ್ನಿಗೌಡ ನಾಪತ್ತೆಯಾಗಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..