ಧಾರವಾಡ –
ಧಾರವಾಡದಲ್ಲಿ ಅರ್ಥಪೂರ್ಣವಾಗಿ ನಡೆಯಿತು ಜಿಲ್ಲಾ ಸರ್ಕಾರಿ ನೌಕರರ ಸಂಘಟನೆಯ ಕಾರ್ಯ ಕ್ರಮ ನೌಕರರಿಗೆ 7ನೇ ವೇತನ ಆಯೋಗ ನೀಡಿದ ಜನಪ್ರತಿಧಿಗಳಿಗೆ ನಡೆಯಿತು ಅಭಿನಂದನೆಯ ಗೌರವ……ಸಾಕ್ಷಿಯಾದ್ರು ಗಣ್ಯರು ರಾಜ್ಯ ಸರ್ಕಾರಿ ನೌಕರರು ಹೌದು
2023-24ನೇ ಸಾಲಿನಲ್ಲಿ ಸಾಧನೆಯನ್ನು ಮಾಡಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಹಾಗೂ ಸರ್ಕಾರಿ ನೌಕರರ ಸರ್ವ ಸದಸ್ಯರ ಸಾಮಾನ್ಯ ಸಭೆಯನ್ನು ಧಾರವಾಡದಲ್ಲಿ ಹಮ್ಮಿಕೊಳ್ಳಲಾಗಿತ್ತು.ನಗರದ ರಪಾಟಿ ಕಲ್ಯಾಣ ಮಂಟದಲ್ಲಿ ಆಯೋಜನೆ ಮಾಡಲಾಗಿದ್ದ ಸಭೆ ಯಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘಟನೆಯ ರಾಜ್ಯಾಧ್ಯಕ್ಷ ಷಡಾಕ್ಷರಿಯವರು ಸೇರಿದಂತೆ ರಾಜ್ಯ ಸಂಘಟನೆಯ ಸದಸ್ಯರು ಮುಖಂಡರ ನೇತ್ರತ್ವ ದಲ್ಲಿ ನೌಕರರ ಸರ್ವ ಸದಸ್ಯರ ಸಭೆ ನಡೆಯಿತು.
ಸಭೆಯ ನಂತರ ವೇದಿಕೆಯ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸೇರಿದಂತೆ ಗಣ್ಯರು ಈ ಒಂದು ಸಭಾ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿದರು.ಇದೇ ವೇಳೆ 7ನೇ ವೇತನ ಆಯೋಗ ಜಾರಿಗೆ ಸಹಕರಿಸಿದ ಶಾಸಕರಿಗೆ ಅಭಿನಂದನಾ ಸಮಾರಂಭವನ್ನು ಕೂಡಾ ಆಯೋಜನೆ ಮಾಡಲಾಗಿತ್ತು.
ಜನಪ್ರತಿನಿಧಿಗಳಿಗೆ ಜಿಲ್ಲಾ ಸಂಘಟನೆಯಿಂದ ಸನ್ಮಾನಿಸಿ ಗೌರವಿಸಲಾಯಿತು ಇದೇ ವೇಳೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ ಸರ್ಕಾರಿ ನೌಕರರು ಇಂದು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ನೌಕರರ ಮೇಲಿನ ಒತ್ತಡ ಕಡಿಮೆ ಮಾಡಬೇ ಕೆಂದರು. ಸರ್ಕಾರ ಮತ್ತು ಸಾರ್ವಜನಿಕರ ಮಧ್ಯದ ಕೊಂಡಿಯಾಗಿ ಸರ್ಕಾರಿ ನೌಕರರು ಕೆಲಸ ಮಾಡುತ್ತಾರೆ.
ಸರ್ಕಾರದ ವರ್ಚಸ್ಸು ನೌಕರನ ಕಾರ್ಯಕ್ಷಮತೆ ಮೇಲೆ ನಿಂತಿರುತ್ತದೆ. ಪ್ರತಿಯೊಬ್ಬ ನೌಕರ ಸರ್ಕಾರದ ರಾಯಭಾರಿಯಂತೆ ಕರ್ತವ್ಯ ನಿರ್ವಹಿಸಿ, ಸರ್ಕಾರದ ಬಗ್ಗೆ ಸದಭಿಪ್ರಾಯ ಮೂಡಿಸಬೇಕೆಂದು ಸಲಹೆ ನೀಡಿದರು.ಇನ್ನೂ ಇದೇ ವೇಳೆ ನವಲಗುಂದ ವಿಧಾನಸಭಾ ಕ್ಷೇತ್ರದ ಶಾಸಕ ಎನ್ ಎಚ್ ಕೋನರೆಡ್ಡಿಯವರು ಮಾತನಾಡಿ ಸರ್ಕಾರಿ ನೌಕರರು ತಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಮಾಡಬೇಕು. ಸರ್ಕಾರಿ ಯೋಜನೆಗಳನ್ನು ಪ್ರತಿಯೊಬ್ಬರಿಗೂ ತಲುಪಿಸಬೇಕು.
ಕರ್ತವ್ಯ ಮತ್ತು ಜವಾಬ್ದಾರಿ ಅರಿತು ಕಾರ್ಯ ನಿರ್ವಹಿಸಬೇಕೆಂದರು.ಇದೇ ವೇಳೆ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ ಮಾತನಾಡಿ,’ ರಾಜ್ಯ ಸರ್ಕಾರ 7ನೇ ವೇತನ ಆಯೋಗದ ಬೇಡಿಕೆ ಯನ್ನು ಈಡೇರಿಸಿದೆ. ಎನ್.ಪಿ.ಎಸ್ ಯೋಜನೆ ರದ್ದುಗೊಳಿಸಿ ಒಪಿಎಸ್ ಜಾರಿ ಮಾಡುವ ಕೆಲಸ ಸರ್ಕಾರದ ಹಂತದಲ್ಲಿ ನಡೆದಿದೆ.
ನೌಕರರಿಗೆ ನಗದು ರಹಿತ ಆರೋಗ್ಯ ಚಿಕಿತ್ಸೆ ನೀಡುವ ಆರೋಗ್ಯ ಸಂಜೀವಿನಿ ಯೋಜನೆ ಅನುಷ್ಠಾನವೂ ಪ್ರಗತಿಯಲ್ಲಿದೆ ಎಂದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಫ್. ಸಿದ್ದನಗೌಡರ ಅಧ್ಯಕ್ಷತೆ ವಹಿಸಿದ್ದರು. ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಸಿ.ಡಿ, ವೈಶುದೀಪ ಫೌಂಡೇಷನ್ ಅಧ್ಯಕ್ಷೆ ಶಿವಲೀಲಾ ಕುಲಕರ್ಣಿ, ದೇವಿದಾಸ ಶಾಂತಿಕರ, ಗಿರೀಶ ಚೌಡಕಿ,
ರಾಜೇಶ ಕೋನರಡ್ಡಿ ವಿ.ಎಫ್.ಚುಳುಕಿ, ಪ್ರಲ್ಹಾದ ಗೆಜ್ಜಿ, ಎ.ಬಿ.ಕೊಪ್ಪದ ಆರ್.ಎಂ. ಹೊಲ್ತಿಕೋಟಿ, ಮುತ್ತಪ್ಪ ಅಣ್ಣಿಗೇರಿ, ಪಿ.ಬಿ.ಕುರಬೆಟ್ಟ, ವಿನಯ ಮೂಷನ್ನವರ, ಗಜಾನನ ಕಟಗಿ,ಸೇರಿದಂತೆ ಹಲವರು ಉಪಸ್ಥಿತರಿದ್ದರು.ಇದೇ ವೇಳೆ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕ ವತಿಯಿಂದ 2023-24ನೇ ಸಾಲಿನ ಪ್ರತಿಭಾ ಪುರಸ್ಕಾರವನ್ನು ಮಾಡಲಾಯಿತು
ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ನೌಕರರ ಮಕ್ಕಳಿಗೆ ಸನ್ಮಾನಿಸಿ ಗೌರವಿಸಲಾಯಿತು ಇದರೊಂದಿಗೆ ಜಿಲ್ಲಾ ಸಂಘಟನೆಯ ಕಾರ್ಯಕ್ರಮ ಅರ್ಥ ಪೂರ್ಣವಾಗಿ ಯಶಶ್ವಿಯಾಗಿ ನಡೆಯಿತು.
ಸುದ್ದಿ ಸಂತೆ ನ್ಯೂಸ್ ಧಾರವಾಡ…..