ಧಾರವಾಡ –
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಧಾರವಾಡದ ವಲಯ ಕಚೇರಿ ಒಂದರಲ್ಲಿ ಬಿಲ್ ಕಲೆಕ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಬಿಲ್ ಕಲೆಕ್ಟರ್ ಮೃತ್ಯುಂಜಯ ಬನವಾಸಿ ನಿಧನ ರಾಗಿದ್ದಾರೆ.ಹಲವಾರು ವರ್ಷಗಳಿಂದ ಪಾಲಿಕೆ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾ ಗಿದ್ದರು
ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಇವರು ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ.ವಿಧಿವಶರಾಗಿರುವ ಇವರ ನಿಧನಕ್ಕೆ ಹುಬ್ಬಳ್ಳಿ-ಧಾರವಾಡ ಮಹಾ ನಗರ ಪಾಲಿಕೆಯ ಆಯುಕ್ತರಾದ ಡಾ ಈಶ್ವರ ಉಳ್ಳಾಗಡ್ಡಿ,ಮುಖ್ಯ ಲೆಕ್ಕಾಧಿಕಾರಿ ವಿಶ್ವನಾಥ, ಅಧಿಕಾರಿಗಳಾದ ತಿಮ್ಮಪ್ಪ,ಗಿರೀಶ ತಳವಾರ, ಗಣೇಶ ಅವರು ಸೇರಿದಂತೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಸಿಬ್ಬಂದಿ ಗಳು ಅಧಿಕಾರಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಧಾರವಾಡ…..