ವಿಜಯಪುರ –
ಮುಖ್ಯಶಿಕ್ಷಕ ಚನ್ನಬಸಪ್ಪ ಹಡಪದ ಇನ್ನೂ ನೆನಪು ಮಾತ್ರ – ಶಾಲಾ ಅವಧಿಯಲ್ಲಿ ಶಾಲೆಯಲ್ಲಿ ನಡೆದಿದ್ದಾರೂ ಏನು….. ಮುಖ್ಯಶಿಕ್ಷಕನ ಸಾವಿಗೆ ಹುಟ್ಟುಕೊಂಡಿವೆ ಹಲವು ಅನುಮಾನಗಳು
ಮುಖ್ಯಶಿಕ್ಷಕರೊಬ್ಬರು ಶಾಲೆಯಲ್ಲಿಯೇ ನೇಣು ಬಿಗುದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರದಲ್ಲಿ ನಡೆದಿದೆ. ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಸಮೀಪದ ನಾಗೂರ ಗ್ರಾಮದ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಒಂದು ಘಟನೆ ನಡೆದಿದೆ. ಶಾಲೆ ಯಲ್ಲಿ ಪ್ರಭಾರಿ ಮುಖ್ಯೋಪಾಧ್ಯಾಯರಾಗಿದ್ದ ಸಿ, ಎಸ್, ಹಡಪದ ಶಾಲೆಯ ಶಿಕ್ಷಕರ ಕೊಠಡಿಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ
ಕಳೆದ 2 ವರ್ಷದಿಂದ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಹಡಪದ ಅವರು ಕಳೆದ ಒಂದು ವರ್ಷದಿಂದ ಪ್ರಭಾರಿ ಮುಖ್ಯೋಪಾಧ್ಯಾ ಯರಾಗಿ ಅಧಿಕಾರ ವಹಿಸಿಕೊಂಡಿದ್ದರು.ಶಾಲಾ ಅವಧಿಯಲ್ಲೇ ಮಧ್ಯಾಹ್ನ 3:30ರ ಸುಮಾರಿಗೆ ಶಿಕ್ಷಕರ ಕೊಠಡಿಯಲ್ಲಿ ಯಾರು ಇರದ ವೇಳೆ ನೇಣು ಬಿಗಿದುಕೊಂಡಿದ್ದಾರೆ. ಶಾಲೆ ಅವಧಿ ಮುಗಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ ಶಾಲೆಯಲ್ಲಿ ಶಿಕ್ಷಕನ ಆತ್ಮಹತ್ಯೆಗೆ ಸರ್ಕಾರಿ ನೌಕರರ ಸಂಘದಿಂದ ಖಂಡನೆ ವ್ಯಕ್ತವಾಗಿದ್ದು ಶಿಕ್ಷಕನ ಸಾವಿನ ಬಗ್ಗೆ ಸಂಪೂರ್ಣ ತನಿಖೆಯಾಗ ಬೇಕು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಸಂಘದ ಅಧ್ಯಕ್ಷ ಶಿವಾನಂದ ಮಂಗಾನವರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇನ್ನೂ ಘಟನಾ ಸಂಬಂಧ ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀ ಲನೆ ನಡೆಸುತ್ತಿದ್ದಾರೆ.
ಸುದ್ದಿ ಸಂತೆ ನ್ಯೂಸ್ ವಿಜಯಪುರ …..