ಕಲಘಟಗಿ –
ಮಾಜಿ ಕ್ಯಾಬಿನೆಟ್ ಸಚಿವರಾದ ಸಂತೋಷ್ ಎಸ್. ಲಾಡ್ ರವರ ನಾಳೆ ಧಾರವಾಡ ಜಿಲ್ಲೆಯ ಕಲಘಟಗಿ ಆಗಮಿಸಲಿದ್ದಾರೆ.06 -1 -2021 ರಂದು ಬೆಂಗಳೂರಿನಿಂದ ವಿಮಾನ ಮೂಲಕ ಮದ್ಯಾಹ್ನ 3:00 ಘಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ.

ನಂತರ ಸಂಜೆ 4:00 ಅಳ್ನಾವರ ತಾಲೂಕಿನ ಹೊನ್ನಾಪುರ ಗ್ರಾಮದಲ್ಲಿ ಧಾರವಾಡ ಹಾಗೂ ಅಳ್ನಾವರ ತಾಲೂಕಿನ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ನಂತರ ಕಲಘಟಗಿಯ ಸ್ವಗೃಹ ಅಮೃತ ನಿವಾಸಕ್ಕೆ ಆಗಮಿಸಿ ವಾಸ್ತವ್ಯ ಮಾಡಲಿದ್ದಾರೆ.

ದಿನಾಂಕ 07-1-20 ಮಧ್ಯಾಹ್ನ12.00 ಗಂಟೆಗೆ ನೆಲ್ಲಿಹರವಿ ಗ್ರಾಮದಲ್ಲಿ ದೇವೇಂದ್ರಪ್ಪ ಸ್ವಾಧಿ ಅವರ ಪುತ್ರನ ಮದುವೆ ಸಮಾರಂಭದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ನಂತರ ಸಂಜೆ ಹುಬ್ಬಳ್ಳಿಯಿಂದ ವಿಶೇಷ ವಿಮಾನ ಮೂಲಕ ಬಳ್ಳಾರಿಗೆ ತಮ್ಮ ಪ್ರಯಾಣವನ್ನು ಬೆಳೆಸಲಿದ್ದಾರೆ.