ಹುಬ್ಬಳ್ಳಿ –
ಬೀದಿ ಬದಿ ವ್ಯಾಪಾರಸ್ಥರನ್ನು ತೆರವುಗೊಳಿಸಿದ್ದನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಬೀದಿ ವ್ಯಾಪಾರಸ್ಥರು ಬೃಹತ್ ಪ್ರತಿಭಟನೆ ಮಾಡಿದರು. ಹುಬ್ಬಳ್ಳಿಯ ಮಹಾನಗರ ಪಾಲಿಕೆ ಕಚೇರಿ ಎದುರು ವ್ಯಾಪಾರಸ್ಥರು ಪ್ರತಿಭಟನೆ ಮಾಡಿದರು. ವ್ಯಾಪಾರಸ್ಥರ ಸಂಘ ಹಾಗೂ ಸಮತಾಸೇನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ದುರ್ಗದ ಬೈಲ್ ಮಾರುಕಟ್ಟೆಯಲ್ಲಿ ವ್ಯಾಪಾರ ವಹಿವಾಟು ನಡೆಸುತ್ತಿದ್ದ ನೂರಾರು ಬೀದಿಬದಿ ವ್ಯಾಪಾರಸ್ಥರು ಪಾಲಿಕೆ ಅಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿ ವ್ಯಾಪಾರಸ್ಥರ ಆಕ್ರೋಶವನ್ನು ವ್ಯಕ್ತಪಡಿಸಿದರು.ಪಾಲಿಕೆ ಆಯುಕ್ತರು ವ್ಯಾಪಾರಕ್ಕೆ ಸ್ಥಳಾವಕಾಶ ನೀಡದೇ ತೆರವುಗೊಳಿಸಿದ್ದಾರೆ ಎಂದು ಆರೋಪವನ್ನು ಮಾಡಿದರು.
ಅಲ್ಲದೇ ನಮ್ಮ ಸಾಮಗ್ರಿಗಳನ್ನು ವಶಕ್ಕೆ ಪಡೆದು ನಾಶ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದರು. ನಮ್ಮ ವಸ್ತುಗಳಿಗೆ ಬೇಕಾಬಿಟ್ಟಿ ದಂಡ ವಿಧಿಸುತ್ತಿದ್ದಾರೆ ಕೂಡಲೇ ಅಧಿಕಾರಿಗಳು ನಮ್ಮ ಸಮಸ್ಯೆಗೆ ಪರಿಹಾರ ನೀಡಬೇಕೆಂದು ಪಟ್ಟು ಹಿಡಿದ ವ್ಯಾಪಾರಸ್ಥರು ಪಾಲಿಕೆಯ ವಿರುದ್ದ ಹೋರಾಟ ಮಾಡಿ ಕೂಡಲೇ ಬೀದಿ ವ್ಯಾಪಾರಕ್ಕೆ ಅನುಕೂಲ ಮಾಡಿಕೊಡಬೇಕು ಹಾಗೇ ವಿನಾಕಾರಣ ತೊಂದರೆ ಕೊಡಬಾರದೆಂದು ಒತ್ತಾಯ ಮಾಡಿದರು. ಪ್ರತಿಭಟನೆಯಲ್ಲಿ ಗುರುನಾಥ ಉಳ್ಳಿಕಾಶಿ,ಪ್ರೇಮನಾಥ್ ಚಿಕ್ಕತುಂಬಳ ಸೇರಿದಂತೆ ಹಲವರು ಉಪಸ್ಥಿತರಿದ್ದರು.