ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರು ಇನ್ನು ಮುಂದೆ ಕಡ್ಡಾಯವಾಗಿ ಗುರುತಿನ ಚೀಟಿ ಧರಿಸುವಂತೆ ಆದೇಶ – ಕೆಂಪು ಹಳದಿ ಬಣ್ಣದ ಟ್ಯಾಗ್ ಧರಿಸು ವಂತೆ ಹೊಸದೊಂದು ಆದೇಶ ಮಾಡಿದ ರಾಜ್ಯ ಸರ್ಕಾರ…..
ರಾಜ್ಯದಲ್ಲಿ ಇನ್ನು ಮುಂದೆ ರಾಜ್ಯ ಸರ್ಕಾರಿ ನೌಕರರು ಕೆಂಪು ಹಳಬಿ ಬಣ್ಣಗಳಿಂದ ಕೂಡಿದ ಗುರುತಿನ ಚೀಟಿಯನ್ನು ಧರಿಸುವಂತೆ ರಾಜ್ಯ ಸರ್ಕಾರ ಆದೇಶವನ್ನು ಮಾಡಿದೆ.ಹೌದು ಸರ್ಕಾರಿ ನೌಕರ’ರು ಗುರುತಿನ ಚೀಟಿಗೆ ಕೆಂಪು-ಹಳದಿ ಬಣ್ಣದ ‘ಟ್ಯಾಗ್’ ಧರಿಸುವುದು ಕಡ್ಡಾಯವನ್ನು ಮಾಡಿ ರಾಜ್ಯ ಸರ್ಕಾರ ಹೊಸದೊಂದು ಆದೇಶ ವನ್ನು ಮಾಡಿದೆ. ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ ಅಭಿಯಾನದ ಅಡಿಯಲ್ಲಿ ಎಲ್ಲಾ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣದ ಗುರುತಿನ ಚೀಟಿಯನ್ನು ಟ್ಯಾಗ್ ಹಾಕಿಕೊಳ್ಳು ವುದು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.
ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ.ನಮ್ಮ ರಾಜ್ಯಕ್ಕೆ ಕರ್ನಾಟಕ ಎಂದು ನಾಮಕರಣಗೊಳಿಸಿ 50 ವರ್ಷಗಳು ಪೂರೈಸಿರುವ ಸುಸಂದರ್ಭದಲ್ಲಿ “ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ” ಅಭಿಯಾನದಡಿ ಎಲ್ಲಾ ರಾಜ್ಯ ಸರ್ಕಾರಿ ನೌಕರರು ಕೆಂಪು-ಹಳದಿ ಬಣ್ಣಗಳನ್ನು ಒಳಗೊಂಡಿರುವ ಟ್ಯಾಗ್ ಹೊಂದಿದ ಗುರುತಿನ ಚೀಟಿಯನ್ನು ಕಡ್ಡಾಯವಾಗಿ ಧರಿಸಬೇಕೆಂದು ಸರ್ಕಾರವು ನಿರ್ಣಯಿಸಿದೆ .
ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳು, ನಿಗಮ, ಮಂಡಳಿ, ನಿರ್ದೇಶನಾ ಲಯ, ಆಯುಕ್ತಾಲಯ ಇತ್ಯಾದಿ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಕಛೇರಿಗಳಲ್ಲಿ ಕರ್ತವ್ಯ ನಿರ್ವಹಿಸುವ ಎಲ್ಲಾ ಅಧಿಕಾರಿ,ಸಿಬ್ಬಂದಿಗಳು ತಮ್ಮ ಇಲಾಖೆ,ಸಂಸ್ಥೆಯ ಗುರುತಿನ ಚೀಟಿಯನ್ನು ಧರಿಸಲು ಅನುವಾಗುವಂತೆ ಹಳದಿ ಮತ್ತು ಕೆಂಪು ಬಣ್ಣದ ಕೊರಳುದಾರವನ್ನು ಒದಗಿಸಲು ತಮ್ಮ ಇಲಾಖೆ,ಸಂಸ್ಥೆಯ ಸಕ್ಷಮ ಪ್ರಾಧಿಕಾರಗಳು ಕೂಡಲೇ ನಿಯಮಗಳನುಸಾರ ಕ್ರಮವಹಿಸು ವಂತೆ ತಿಳಿಸಿದ್ದಾರೆ
ನೂತನ ಟ್ಯಾಗ್ ನ್ನ https://photos.app.goo.gl/YcJeNHnDNPecW8Q48 ನ ಆನ್‌ಲೈನ್ ವಿಳಾಸದಿಂದ ಡೌನ್‌ಲೋಡ್ ಮಾಡಿಕೊಳ್ಳುವಂತೆ ಸೂಚಿಸಿ ಆದೇಶದಲ್ಲಿ ಉಲ್ಲೇಖ ಮಾಡಿ ತಿಳಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..