ಬೆಂಗಳೂರು –
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ರಾಜ್ಯವ್ಯಾಪಿ ಧರಣಿಯ ಬೆನ್ನಲ್ಲೇ ಶಿಕ್ಷಕರು ಶಾಲೆಗಳನ್ನು ತೊರೆದು ಪ್ರತಿಭಟನೆಗೆ ಆಗಮಿಸಿದ ಹಿನ್ನಲೆಯಲ್ಲಿ ಎಚೆತ್ತಗೊಂಡ ಸರ್ಕಾರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜೊತೆ ಇಂದು ಸಿಎಂ ಸಭೆ ಶಿಕ್ಷಕರ ಸಂಘದ ಬೇಡಿಕೆ ಬಗ್ಗೆ ಚರ್ಚಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ತುರ್ತು ಸಭೆ ಕರೆದಿದ್ದಾರೆ
ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಸಿಎಂ ಸಭೆ ನಡೆಯಲಿದ್ದು ಬೆಳಗ್ಗೆ 11 ಗಂಟೆಗೆ ಗೃಹಕಚೇರಿ ಕೃಷ್ಣಾದಲ್ಲಿ ಶಿಕ್ಷಕರ ಸಂಘದ ಜೊತೆ ಸಭೆ ವಿವಿಧ ಬೇಡಿಕೆ ಈಡೇರಿಕೆಗೆ ರಾಜ್ಯವ್ಯಾಪಿ ಧರಣಿ ನಡೆಸ್ತಿರುವ ಶಿಕ್ಷಕರು ಶಿಕ್ಷಕರ ಸಮಸ್ಯೆ ಆಲಿಸಲು ಸಮಯ ನೀಡಿರುವ ಸಿಎಂ ಸುಮಾರು 1.20 ಲಕ್ಷ ಶಿಕ್ಷಕರಿಗೆ ಅನ್ಯಾಯವಾಗಲಿದೆ.
ಹಾಗಾಗಿ ಕೂಡಲೇ ಈ ಆದೇಶವನ್ನು ಹಿಂಪಡೆಯ ಬೇಕೆಂದು ಪ್ರತಿಭಟನಾನಿರತ ಶಿಕ್ಷಕರು ಆಗ್ರಹಿಸಿದ್ದಾರೆ. 2016ಕ್ಕಿಂತ ಮೊದಲು ನೇಮಕ ಹೊಂದಿದ ಶಿಕ್ಷಕರನ್ನು ಎನ್‌ಸಿಟಿ ನಿಯಮಾವಳಿ ಪ್ರಕಾರ ಪದವಿ ವಿದ್ಯಾರ್ಹತೆ ಹೊಂದಿದ ಎಲ್ಲಾ ಸೇವಾನಿರತ ಶಿಕ್ಷಕರನ್ನು ಜಿಪಿಟಿ ಶಿಕ್ಷಕರೆಂದು ಸೇವಾ ಜ್ಯೇಷ್ಠತೆಯೊಂದಿಗೆ ಪುನರ್ ಪದನಾಮಕರಣ ಮಾಡಬೇಕು.
ಈ ಮೊದಲಿನ ಪ್ರೌಢಶಾಲಾ ಬಡ್ತಿ ನಿಯಮಾವಳಿಯಂತೆ 2016ರ ಮೊದಲು ನೇಮಕಾತಿ ಹೊಂದಿದ ಹಾಗೂ ಬಿಎಡ್ ಪದವಿ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು ಖಾಲಿಯಾಗುವವರೆಗೂ ಪ್ರೌಢಶಾಲೆಗೆ ಬಡ್ತಿ ನೀಡಬೇಕು ನಂತರದಲ್ಲಿ ಹೊಸದಾಗಿ ನೇಮಕಗೊಂಡ ಜಿಪಿಟಿ ಶಿಕ್ಷಕರನ್ನು ಪರಿಗಣಿಸಬೇಕು.
ಈ ಮೊದಲಿನ ನಿಯಮಾವಳಿಯಂತೆ ಮುಖ್ಯ ಶಿಕ್ಷಕರ ಹುದ್ದೆಗೆ ವಿದ್ಯಾರ್ಹತೆಯನ್ನು ಪರಿಗಣಿಸದೆ ಅಖಂಡ ಸೇವಾ ಹಿರಿತನದ ಆಧಾರದ ಮೇಲೆ ಬಡ್ತಿ ನೀಡುವುದು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರು ಪ್ರತಿಭಟನೆಗೆ ಇಳಿದಿದ್ದು ಇವೆಲ್ಲ ವಿಚಾರ ಗಳ ಕುರಿತು ನಿರ್ಧಾರ ವಾಗಲಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..