ಬೆಂಗಳೂರು –
ಪ್ರಸಕ್ತ ಸಾಲಿನಿಂದ ಸರ್ಕಾರಿ ಪ್ರಾಥಮಿಕ ಶಾಲೆ ಗಳಲ್ಲಿ ಆಂಗ್ಲ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ ಹೌದು ರಾಜ್ಯ ಸರ್ಕಾರ ಮಹತ್ವದ ಆದೇಶವನ್ನು ಹೊರಡಿಸಿದೆ.ಈ ಕುರಿತು ಶಾಲಾ ಶಿಕ್ಷಣ & ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದಾರೆ.ರಾಜ್ಯದ 1000 ಸರ್ಕಾರಿ ಶಾಲೆಗಳಲ್ಲಿ ಸಾಲಿನಿಂದ 1ನೇ ತರಗತಿಯಿಂದ ಹಾಲಿ ಇರುವ ಕನ್ನಡ ಮಾಧ್ಯಮದ ಜೊತೆಗೆ ಆಂಗ್ಲ ಮಾಧ್ಯಮ ತರಗತಿ ಆರಂಭಕ್ಕೆ ಅನುಮತಿಸಿ ಆದೇಶಿಸಿದೆ.
ಆಂಗ್ಲ ಮಾಧ್ಯಮ (ದ್ರಿಭಾಷಾ) ಶಾಲೆಗಳನ್ನು ಪ್ರಾರಂಭಿಸಲು ಘೋಷಿಸಿದ ಪ್ರಯುಕ್ತ ಸರ್ಕಾರವು ಮೊದಲ ಹಂತದಲ್ಲಿ 1419 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಇರುವ ಕನ್ನಡ ಇತರೆ ಮಾಧ್ಯಮದ ಜೊತೆಯಲ್ಲಿ ದ್ವಿಭಾಷಾ ಮಾಧ್ಯಮ ಶಾಲೆಗಳನ್ನೂ ಪ್ರಾರಂಭಿಸಲು ಸರ್ಕಾರ ಅನುಮತಿಸಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..