ಬೀದರ್ –
ಶಿಕ್ಷಕರ ವರ್ಗಾವಣೆಗೆ ಒತ್ತಾಯಿಸಿ ಜಿಲ್ಲಾಧಿಕಾರಿ ಗೆ ಮನವಿ ನೀಡಿದ ಘಟನೆ ಬೀದರ್ ಜಿಲ್ಲೆಯ ಬಾಲ್ಕಿ ಯಲ್ಲಿ ನಡೆದಿದೆ.ಬಾಲ್ಕಿ ತಾಲ್ಲೂಕಿನ ಕೋನಮೇಳ ಕುಂದಾ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾಚಾರ್ಯರ ಮತ್ತು ಶಿಕ್ಷಕರ ವಿದ್ಯಾರ್ಥಿ ನಿಯ ರೊಂದಿಗಿನ ಅನುಚಿತ ವರ್ತನೆ ವಿರುದ್ಧ ಗ್ರಾಮಸ್ಥರು ಸಿಡಿದೆದ್ದಿದ್ದಾರೆ.
ವಸತಿ ಶಾಲೆಯಲ್ಲಿ ಕರ್ತವ್ಯಲೋಪ ಎಸಗುತ್ತಿರುವ ಕಾಯಂ ಶಿಕ್ಷಕರು ಸ್ಥಳೀಯ ಹೊರ ಗುತ್ತಿಗೆ ಶಿಕ್ಷಕರನ್ನು ವರ್ಗಾವಣೆ ಮಾಡುವಂತೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಂತೋಷ ಮಾನಕಾರ ಸೇರಿ ಗ್ರಾಮದ ಯುವಕರು ಒತ್ತಾಯಿಸಿದ್ದಾರೆ.ಈ ಕುರಿತು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಪತ್ರ ಸಲ್ಲಿಸಿ ಒತ್ತಾಯಿಸಿದ್ದಾರೆ.
ಕೆಲ ಶಿಕ್ಷಕರು ಸ್ವಪ್ರತಿಷ್ಠೆಗಾಗಿ ತಮ್ಮದೇ ಗುಂಪು ಸೃಷ್ಟಿಸಿಕೊಂಡು ಜಗಳ ಮಾಡಿಕೊಳ್ಳುತ್ತಿದ್ದಾರೆ. ಇದರಿಂದ ಶಾಲಾ ಪರಿಸರ ಹಾಳಾಗುತ್ತಿದೆ.ಮಕ್ಕಳ ಶೈಕ್ಷಣಿಕ ಬೆಳವಣಿಗೆ ಕುಂಠಿತಗೊಳ್ಳುತ್ತಿದೆ.ಕೂಡಲೇ ಇಂತವರನ್ನು ವರ್ಗಾಯಿಸಬೇಕು ಎಂದು ಮನವಿ ಪತ್ರದಲ್ಲಿ ಒತ್ತಾಯ ಮಾಡಿದ್ದಾರೆ.
ಗ್ರಾಮದ ಪ್ರಮುಖರಾದ ಶಿವರಾಜ ಹಂಪಾ ರಾಜಕುಮಾರ ಚಲ್ವಾ ಪಂಡರಿ ಮೇತ್ರೆ ಪ್ರವೀಣ ಗಾಯಕವಾಡ ಸೇರಿದಂತೆ ಈ ಒಂದು ಸಂದರ್ಭದಲ್ಲಿ ಒತ್ತಾಯ ಮಾಡಿದರು.
ಸುದ್ದಿ ಸಂತೆ ನ್ಯೂಸ್ ಬಾಲ್ಕಿ……