This is the title of the web page
This is the title of the web page

Live Stream

[ytplayer id=’1198′]

September 2024
T F S S M T W
 1234
567891011
12131415161718
19202122232425
2627282930  

| Latest Version 8.0.1 |

State News

ರಾಜ್ಯದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವರು – ರಾಜ್ಯದ ಸರ್ಕಾರಿ ಶಾಲೆಗಳಿಗೆ ಬರಲಿದೆ ವಾಹನದ ವ್ಯವಸ್ಥೆ…..ಪ್ರಾಯೋಗಿಕವಾಗಿ ರಾಜ್ಯದ 500 ಶಾಲೆಗಳಲ್ಲಿ ವಾಹನ ವ್ಯವಸ್ಥೆ ಆರಂಭ…..

ರಾಜ್ಯದ ಸರ್ಕಾರಿ ಶಾಲೆಗಳ ಮಕ್ಕಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವರು –  ರಾಜ್ಯದ ಸರ್ಕಾರಿ ಶಾಲೆಗಳಿಗೆ ಬರಲಿದೆ ವಾಹನದ ವ್ಯವಸ್ಥೆ…..ಪ್ರಾಯೋಗಿಕವಾಗಿ ರಾಜ್ಯದ 500 ಶಾಲೆಗಳಲ್ಲಿ ವಾಹನ ವ್ಯವಸ್ಥೆ ಆರಂಭ…..
WhatsApp Group Join Now
Telegram Group Join Now

ಬೆಂಗಳೂರು –

ಖಾಸಗಿ ಶಾಲೆಗಳಂತೆಯೇ ಇನ್ಮುಂದೆ ಸರ್ಕಾರಿ ಶಾಲೆಗಳಲ್ಲಿಯೂ ಮಕ್ಕಳನ್ನು ಕರೆದುಕೊಂಡು ಬರಲು ಕಳುಹಿಸಲು  ವಾಹನದ ವ್ಯವಸ್ಥೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ ಮಂಗಳೂರಿನಲ್ಲಿ ಮಾತ ನಾಡಿದ ಅವರು ಪಿಕಪ್, ಡ್ರಾಪ್ ವಾಹನ ವ್ಯವಸ್ಥೆ ಜಾರಿಗೆ ಬರಲಿದೆ.

4ರಿಂದ 5 ಕಿ.ಮೀ ವ್ಯಾಪ್ತಿಯ ಮಕ್ಕಳನ್ನು ಶಾಲೆಗೆ ಕರೆತರಲು ಶಾಲಾ ಬಸ್ ಗಳನ್ನು ಉಚಿತವಾಗಿ ಪೂರೈಸಲು ಶಿಕ್ಷಣ ಇಲಾಖೆ ಮುಂದಾಗಿದೆ. ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಾಲೆಗೆ ಕರೆತರುವ ನಿಟ್ಟಿನಲ್ಲಿ ಕೆಪಿಎಸ್ ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳು ಆರಂಭವಾಗಿದ್ದು ಈ ಶಾಲೆಗಳಿಗೆ ಮಕ್ಕಳನ್ನು ಸೆಳೆಯುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಬಸ್ ವ್ಯವಸ್ಥೆಗೆ ನಿರ್ಧರಿಸಿದೆ.

ಈ ಬಗ್ಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದರು. ಕೆಪಿಎಸ್ ಶಾಲೆಗಳಿಗೆ ಮಕ್ಕಳು ಬರುವಂತೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗು ತ್ತಿದ್ದು ಸರ್ಕಾರಿ ಶಾಲೆಗಳಲ್ಲಿಯೂ ಮಕ್ಕಳ ಪಿಕಪ್  ಡ್ರಾಪ್ ವ್ಯವಸ್ಥೆಗೆ ಬಸ್ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ.

ರಾಜ್ಯದಲ್ಲಿ 285 ಕರ್ನಾಟಕ ಪಬ್ಲಿಕ್ ಸ್ಕೂಲ್ ಗಳಿದ್ದು ಪ್ರಸಕ್ತ ವರ್ಷದಿಂದ ಇನ್ನೂ 500 ಶಾಲೆಗಳು ಆರಂಭವಾಗಲಿವೆ. ಎಲ್ ಕೆಜಿಯಿಂದ 12ನೇ ತರಗತಿವರೆಗೂ ಒಂದೇ ಕಡೆ ಶಿಕ್ಷಣ ಒದಗಿಸುವ ವ್ಯವಸ್ಥೆ ಮಾಡಲಾಗುತ್ತದೆ.ಹೀಗಾಗಿ 4-5 ಕಿ.ಮೀ ವ್ಯಾಪಿಯಲ್ಲಿರುವ ಮಕ್ಕಳನ್ನು ಶಾಲೆಗೆ ಕರೆತರಲು ಶಾಲಾ ಬಸ್ ಗಳನ್ನು ಉಚಿತ ವಾಗಿ ಪೂರೈಸಲಾಗುವುದು ಎಂದರು

ಸುದ್ದಿ ಸಂತೆ ನ್ಯೂಸ್ ಮಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk