ಬೆಂಗಳೂರು –
ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಬರಲಿದೆ ಬಯೋಮೆಟ್ರಿಕ್ – ಶಾಲೆಯಲ್ಲಿ ಮಕ್ಕಳ ಹಾಜರಾತಿ ಕಡ್ಡಾಯಕ್ಕೆ ಇಲಾಖೆಯಿಂದ ಮಹತ್ವದ ಹಾಜರಾತಿ ವ್ಯವಸ್ಥೆ ಹೌದು ಶಾಲೆ ಗಳಲ್ಲಿಯೂ ಮಕ್ಕಳಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೆ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.
ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಲು ಶಾಲಾ ಶಿಕ್ಷಣ ಇಲಾಖೆ ಸಿದ್ಧತೆ ನಡೆಸಿದೆ.ಪ್ರತಿ ಜಿಲ್ಲೆಯ ಒಂದೊಂದು ಶಾಲೆ ಗಳಲ್ಲಿ ಪ್ರಾಯೋಗಿಕವಾಗಿ ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಿ ಹಾಜರಾತಿ ಪಡೆಯಲಾಗಿದೆ.
ಈ ವೇಳೆ ಯಾವುದೇ ತಾಂತ್ರಿಕ ದೋಷಗಳಿಲ್ಲದೆ ಶಾಲೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ಪಡೆಯುವ ಪ್ರಯೋಗ ಯಶಸ್ವಿಯಾಗಿದೆ.ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲಿಯೂ ಬಯೋಮೆಟ್ರಿಕ್ ಹಾಜರಾತಿ ಕಡ್ಡಾಯಗೊಳಿ ಸುವ ಬಗ್ಗೆ ಶಾಲಾ ಶಿಕ್ಷಣ ಇಲಾಖೆ ಯೋಜನಾ ವರದಿ ಸಿದ್ದಪಡಿಸಿದೆ.
ಮುಂದಿನ ಹಂತದ ಸಿದ್ಧತೆ ಪೂರ್ಣಗೊಳಿಸಿ ಎಲ್ಲಾ ಶಾಲೆಗಳಲ್ಲಿ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ ಜಾರಿಗೊಳಿಸಲಾಗುವುದು ಎಂಬ ಮಾಹಿತಿ ಯನ್ನು ಅಧಿಕಾರಿಗಳು ನೀಡಿದ್ದಾರೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..