ಬೆಂಗಳೂರು –
ಕರ್ನಾಟಕ ಸರ್ಕಾರವು ಆಡಳಿತ ಯಂತ್ರಕ್ಕೆ ಮತ್ತೊಂದು ಸರ್ಜರಿ ಯನ್ನ ಮಾಡಿದ್ದು ಮತ್ತೆ ಐಎಎಸ್ ಅಧಿಕಾರಿಗಳ ವರ್ಗಾವಣೆ ಯೊಂದಿಗೆ ಕೆಲವು ಬದಲಾವಣೆಗಳನ್ನು ಮಾಡಿದೆ ಹೌದು ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶವನ್ನು ಹೊರಡಿಸಿದೆ.
ಶಾಲಾ ಶಿಕ್ಷಣ ಇಲಾಖೆ ಆಯುಕ್ತರಾಗಿದ್ದ ಬಿ. ಬಿ. ಕಾವೇರಿ ಅವರನ್ನು ವರ್ಗಾವಣೆ ಮಾಡಲಾಗಿದ್ದು ಡಾ. ತ್ರಿಲೋಕ್ ಚಂದ್ರ ಕೆ. ವಿ ಇವರನ್ನು ಮುಂದಿನ ಆದೇಶದ ತನಕ ಶಾಲಾ ಶಿಕ್ಷಣ ಇಲಾಖೆ ಆಯುಕ್ತ ರನ್ನಾಗಿ ನೇಮಕ ಮಾಡಲಾಗಿದ್ದು ಇದರೊಂದಿಗೆ ಇಲಾಖೆಗೆ ಹೊಸ ಆಯುಕ್ತರು ಬಂದಂತಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..