ಬೆಂಗಳೂರು –
ಹೌದು ಇತ್ತೀಚೆಗೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿದ್ದು, ಈ ಕುರಿತಾಗಿ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು ಶಿಕ್ಷಣ ಇಲಾಖೆ ಅಧೀನದಲ್ಲಿ ಮಹಿಳಾ ದೌರ್ಜನ್ಯ ತಡೆಗೆ ಆಂತರಿಕ ದೂರು ಸಮಿತಿಯೊಂದನ್ನು ರಾಜ್ಯ ಸರ್ಕಾರ ರಚನೆ ಮಾಡಿ ಆದೇಶ ಹೊರಡಿಸಿದೆ.
ಮಹಿಳಾ ಅಧಿಕಾರಿ, ಶಿಕ್ಷಕಿಯರು ಹಾಗೂ ಸಿಬ್ಬಂದಿಗೆ ಕಿರುಕುಳ, ಮಾನಸಿಕ ಹಿಂಸೆ, ದುರುದ್ದೇಶಪೂರ್ವ ಕವಾಗಿ ಕರ್ತವ್ಯಕ್ಕೆ ಅಡ್ಡಿ ಹಾಗೂ ಲೈಂಗಿಕ ದೌರ್ಜನ್ಯ ಮುಂತಾದ ಘಟನೆಗಳ ಪರಿಹಾರಕ್ಕೆ 9 ಮಹಿಳಾ ಅಧಿಕಾರಿಗಳ ಸಮಿತಿಯನ್ನು ರಾಜ್ಯ ಸರ್ಕಾರ ರಚಿಸಿದೆ.
ಈ ಸಮಿತಿಯು ಕಾಲಕಾಲಕ್ಕೆ ಶಿಕ್ಷಣ ಇಲಾಖೆ ಅಧೀನದ ಮಹಿಳಾ ಅಧಿಕಾರಿ, ಸಿಬ್ಬಂದಿ ಹಾಗೂ ಶಿಕ್ಷಕಿಯರ ದೂರು ಪರಿಶೀಲನೆ ನಡೆಸುತ್ತದೆ.ಅಲ್ಲದೆ ಇತ್ತೀಚಿಗೆ ಕನ್ನಡ ಚಿತ್ರರಂಗದಲ್ಲಿಯೂ ಕೂಡ ಮಹಿಳೆ ಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿ ಬಂದಿತ್ತು.
ಈ ಹಿನ್ನೆಲೆಯಲ್ಲಿ ನಟ ಚೇತನ ಅಹಿಂಸಾ ಸೇರಿದಂತೆ ಹಲವು ಹಿರಿಯ ನಟ ನಟಿಯರು ಸೇರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಯಾಗಿ ಕೇರಳ ಮಾದರಿಯಲ್ಲಿ ಹೇಮಾ ಸಮಿತಿ ರಚನೆ ಮಾಡಿ ಎಂದು ಮನವಿ ಮಾಡಿದ್ದರು.ಇದೀಗ ಶಿಕ್ಷಣ ಇಲಾಖೆ ಅಧೀನ ದಲ್ಲಿ ಮಹಿಳಾ ದೌರ್ಜನ್ಯ ತಡೆಗೆ ರಾಜ್ಯ ಸರ್ಕಾರ ಮುಂದಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..