ಬೆಂಗಳೂರು –
ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್ ವೊಂದನ್ನು ನೀಡಿದೆ. ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದ ಕೆಲವು ನಿರ್ದಿಷ್ಟವಾದ ವಿಷಯಗಳಿಗೆ ಅನುಮೋದನೆ ನೀಡವಂತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.ರಾಜ್ಯ ಸರ್ಕಾರಿ ನೌಕರರು ಹಾಗೂ ಕೇಂದ್ರ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರ ಹಾಗೂ ಕೇಂದ್ರ ಸರ್ಕಾರಗಳೆರಡೂ ಸಹ ವಿವಿಧ ಸೌಲಭ್ಯಗಳನ್ನು ನೀಡುತ್ತಿವೆ. ಅಲ್ಲದೇ ಇತ್ತೀಚಿನ ದಿನಗಳಲ್ಲಿ ಡಿ.ಎ ವಿಷಯದಲ್ಲೂ ಕೆಲವು ಮಹತ್ವದ ಬದಲಾವಣೆಗಳು ಆಗಿವೆ.
ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನು (ಡಿಎ) ಶೇ.3ರಷ್ಟು ಹೆಚ್ಚಳ ಮಾಡಲಾಗಿದೆ. ಈ ನಡುವೆ ರಾಜ್ಯ ಸರ್ಕಾರವು ಸಹ ಸರ್ಕಾರಿ ನೌಕರರೊಂದಿಗೆ ನಿವೃತ್ತ ನೌಕರರಿಗೂ ಕೆಲವೊಂದು ವಿನಾಯಿತಿಗಳನ್ನು ನೀಡಿದೆ ಕರ್ನಾಟಕ ರಾಜ್ಯ ನಿವೃತ್ತ ನೌಕರರಿಗೆ ವಿಶೇಷ ವಿನಾಯಿತಿಯನ್ನು ನೀಡಲಾಗಿದೆ. 01.07.2022 ರಿಂದ 31.07.2024ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ಕೆಲವು ವಿನಾಯಿತಿಗಳನ್ನು ನೀಡುವಂತೆ ಮನವಿ ಮಾಡ ಲಾಗಿತ್ತು. ಇದಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಧ್ವನಿಗೂಡಿಸಿದ್ದಾರೆ.
ಈ ಬಗ್ಗೆ ಕ್ರಮ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಪತ್ರ ಬರೆದಿದ್ದಾರೆ. ಡಿ.ಸಿ.ಆರ್.ಜಿ ಕಮ್ಯುಟೇಶನ್,ಗಳಿಕೆ ರಜೆ, ನಗದೀಕರ ಣದ ಮೊತ್ತವನ್ನು (ಲೀವ್ ಎನ್‌ಕ್ಯಾಶ್‌ಮೆಂಟ್) 7ನೇ ವೇತನ ಆಯೋಗದ ಲೆಕ್ಕಾಚಾರದಲ್ಲಿ ನೀಡಲು ಹಾಗೂ ಸರ್ಕಾರಿ ಆದೇಶ ಸಂಖ್ಯೆ: ಆಇ21ಎಸ್‌ಆರ್‌ಪಿ2024ರ ಬಗ್ಗೆ ಪ್ರಸ್ತಾಪಿಸಿದ್ದಾರೆ.ಇದರಲ್ಲಿ ಆರ್ಥಿಕ ಸೌಲಭ್ಯವನ್ನು 01.08.2024ರ ಬದಲಾಗಿ 01.07.2022ರಿಂದ 31.07.2024ರ ಅವಧಿಯಲ್ಲಿ ನಿವೃತ್ತರಾದ ನೌಕರರಿಗೆ ಪ್ರಸ್ತಾವನೆ (ಪ್ರಾಪ್ತವಾಗತಕ್ಕದ್ದು) ಎಂದು ತಿದ್ದುಪಡಿ ಮಾಡಬೇಕು ಎಂದು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲು.
ಅಲ್ಲದೇ ಈ ವಿಷಯವನ್ನು ಅಂಗೀಕರಿಸಿ ಪರಿಷ್ಕೃತ ಆದೇಶ ಹೊರಡಿಸುವಂತೆ ಮನವಿ ಮಾಡಲಾಗಿದೆ. ಈ ಪತ್ರವನ್ನು ಆದೇಶ ಪತ್ರದೊಂದಿಗೆ ಸೇರಿಸುತ್ತಿರುವುದಾಗಿ ಯೂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದ ಪತ್ರದಲ್ಲಿ ಈ ವಿಷಯವನ್ನು ಪ್ರಸ್ತಾಪಿಸಿರುವ ಡಿ.ಕೆ ಶಿವಕುಮಾರ್ ಈ ಮನವಿಯನ್ನು ಸಹಾನುಭೂತಿ ದೃಷ್ಟಿಯಿಂದ ಪರಿಗಣಿಸುವಂತೆ ಹಾಗೂ ನಿಯಮಾನು ಸಾರ ಸೂಕ್ತ ಆದೇಶ ಹೊರಡಿಸುವಂತೆ ಮನವಿ ಮಾಡಿದ್ದಾರೆ.