This is the title of the web page
This is the title of the web page

Live Stream

[ytplayer id=’1198′]

January 2025
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

ರಾಜ್ಯದ ಶಿಕ್ಷಕರಿಗೆ ಎಚ್ಚರಿಕೆ ಸಂದೇಶ ನೀಡಿದ ಶಿಕ್ಷಣ ಇಲಾಖೆ – ತಪ್ಪಿದ್ರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಇಲಾಖೆ…..

ರಾಜ್ಯದ ಶಿಕ್ಷಕರಿಗೆ ಎಚ್ಚರಿಕೆ ಸಂದೇಶ ನೀಡಿದ ಶಿಕ್ಷಣ ಇಲಾಖೆ – ತಪ್ಪಿದ್ರೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ಇಲಾಖೆ…..
WhatsApp Group Join Now
Telegram Group Join Now

ಬೆಂಗಳೂರು

ರಾಜ್ಯದ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಎಚ್ಚರಿಕೆಯ ಸಂದೇಶ ವೊಂದನ್ನು ನೀಡಿದೆ ಹೌದು ನಿರ್ಧಿಷ್ಟಪಡಿಸಿದ ಹುದ್ದೆ ಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವವರು ಯಾವುದೇ ಶಿಕ್ಷಕರು ಸಂಘ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು ಅಥವಾ ಚುನಾವಣಾ ಪ್ರಚಾರ ಕಾರ್ಯ ದಲ್ಲಿ ಸಕ್ರಿಯವಾಗಿ ಭಾಗವಹಿಸಲು ಮತ್ತು ಪದಾಧಿಕಾರಿ ಯಾಗಲು ಅವಕಾಶವಿಲ್ಲದಿರುವ ಎಂಬುದಾಗಿ ಶಾಲಾ ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.ಒಂದು ವೇಳೆ ಈ ನಿಯಮವನ್ನು ಮೀರಿದ್ರೆ ಕಾನೂನು ಕ್ರಮ ಕೈಗೊಳ್ಳು ವುದಾಗಿ ಎಚ್ಚರಿಕೆ ನೀಡಿದೆ.

ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಅಧಿಕೃತ ಜ್ಞಾಪನ ಹೊರಡಿಸಿದ್ದು ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿ ನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ: 04) ಸೆಕ್ಷನ್-8(1) ರಲ್ಲಿ ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ನಿಯಮ

15ರಲ್ಲಿ ಕಲ್ಪಿಸಿರುವ ಅವಕಾಶಗಳಂತೆ ನಿರ್ಧಿಷ್ಟಪಡಿಸಿದ ಹುದ್ದೆಗಳಿಗೆ ಲಿಖಿತ ಪರೀಕ್ಷೆ ನಡೆಸುವ ಮೂಲಕ ಅಯ್ಕೆ ಯಾದ ಶಿಕ್ಷಕರನ್ನು ಕೌನ್ಸಿಲಿಂಗ್ ಮೂಲಕ ನಿರ್ಧಿಷ್ಟಪಡಿ ಸಿದ ಹುದ್ದೆಗೆ ಸ್ಥಳ ನಿಯುಕ್ತಿಗೊಳಿಸಲಾಗಿರುತ್ತದೆ. ಈ ಸಂಬಂಧ ಉಲ್ಲೇಖಿತ-3 ರಲ್ಲಿ ಹೊರಡಿಸಲಾಗಿರುವ ಅಧಿಸೂಚನೆಯ (ಪುಟ ಸಂ-2 ಕ್ರ.ಸಂ-8, ಪುಟ ಸಂ4 ಕ್ರ.ಸಂ-9 ಮತ್ತು ಪುಟ ಸಂಖ್ಯೆ-, ಕ್ರಸಂ-13 ರಲ್ಲಿ) ರ ಸಕಾರ ಹುದ್ದೆಗಳಿಗೆ ಆಯ್ಕೆ ಬಯಸುವ ಅಭ್ಯರ್ಥಿಗಳು

ಸರ್ಕಾರದಿಂದ ಮಾನ್ಯತೆ ಪಡೆದ ಯಾವುದೇ ಸಂಘ ಸಂಸ್ಥೆ ಮತ್ತು ಇತರೆ ಯಾವುದೇ ಸಹಕಾರ ಸಂಘ ಸಂಸ್ಥೆಗಳ ಚುನಾಯಿತ ಸದಸ್ಯರು,ನಾಮನಿರ್ದೇಶಿತ ಸದಸ್ಯರು,ಅಧ್ಯಕ್ಷರು, ಕಾರ್ಯದರ್ಶಿ, ಖಜಾಂಚಿ, ಪದಾಧಿಕಾರಿಗಳು ಸೇರಿದಂತೆ ಯಾವುದೇ ಹುದ್ದೆಯನ್ನು ಹೊಂದಿರತಕ್ಕದಲ್ಲ ಒಂದು ವೇಳೆ ಹೊಂದಿದ್ದಲ್ಲಿ ಆ ಹುದ್ದೆಯನ್ನು ತ್ಯಜಿಸಿ ಆ ಬಗ್ಗೆ ಲಿಖಿತ ಮುಚ್ಚಳಿಕೆ ಯನ್ನುನೀಡಿದ ನಂತರ ಅರ್ಜಿಯನ್ನು ಸಲ್ಲಿಸತಕ್ಕದ್ದು,

ಒಂದು ಬಾರಿ ನಿರ್ದಿಷ್ಟಪಡಿಸಿದ ಹುದ್ದೆಯ ಕರ್ತವ್ಯಕ್ಕೆ ಹಾಜರಾದ ನಂತರ ಮೇಲಿನ ಯಾವುದೇ ಹುದ್ದೆಯನ್ನು ಹೊಂದಲು ಅವಕಾಶವಿರುವುದಿಲ್ಲ‌ ಆದಾಗ್ಯೂ ರಾಜ್ಯದ ಕೆಲವು ಜಿಲ್ಲೆಗಳಲ್ಲಿನ ಸಿ.ಆರ್.ಪಿ,ಬಿ.ಆರ್.ಪಿ,ಇ.ಸಿ.ಒ ಗಳು ಪ್ರಸ್ತುತ ಅಧಿಸೂಚಿಸಲಾಗಿರುವ ಸರ್ಕಾರಿ ನೌಕರರ ಚುನಾವಣೆಯಲ್ಲಿ ಮತ್ತು ಪಾಥಮಿಕ ಶಾಲಾ ಶಿಕ್ಷಕರ ಸಂಘದ ಚುನಾವಣೆಯಲ್ಲಿ ಸ್ಪರ್ಧಿಸಲು ನಾಮಪತ್ರ ಪರಿಗಣಿಸಲಾಗಿದೆ.

ಸಲ್ಲಿಸುತ್ತಿದ್ದು ಈ ಗಂಭೀರವಾಗಿ ವಿಚಾರವನ್ನು ಬಹಳ ಇದರಿಂದ ರಾಜ್ಯ ಕಛೇರಿಯಿಂದ ಹೊರಡಿಸಲಾಗಿರುವ ಅಧಿಸೂಚನೆಯಲ್ಲಿರುವ ಷರತ್ತುಗಳ ಉಲ್ಲಂಘನೆಯಾ ಗುತ್ತಿದ್ದು ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಕೋರಿ ಉಲ್ಲೇಖಿತ-2 ರಲ್ಲಿ ಅಧ್ಯಕ್ಷರು ಲಿಪಿಕ ನೌಕರರ ಸಂಘ ಇವರು ಮನವಿ ಸಲ್ಲಿಸಿರುತ್ತಾರೆ.

ಈ ಹಿನ್ನೆಲೆಯಲ್ಲಿ, ಸಮಗ್ರ ಶಿಕ್ಷಣ ಅಭಿಯಾನ ಯೋಜನೆ ಯಡಿಯಲ್ಲಿ ರೂಪಿತವಾಗಿರುವ ಸಿ.ಆರ್.ಪಿ, ಬಿ.ಆರ್.ಪಿ ಶಿಕ್ಷಣ ಸಂಯೋಜರು, ಐ.ಇ.ಆರ್.ಟಿ ಬಿ.ಐ.ಇ.ಆರ್.ಟಿ ಮತ್ತು ಇನ್ನಿತರೆ ನಿರ್ಧಿಷ್ಟಪಡಿಸಿದ ಹುದ್ದೆಗಳು ಯೋಜನೆಯ ಕಾರ್ಯ ಚಟುವಟಿಕೆಗಳನ್ನು ಕ್ಲಸ್ಟರ್ ಹಾಗೂ ಬ್ಲಾಕ್ ಹಂತಗಳಲ್ಲಿ ಕಾರ್ಯರೂಪಕ್ಕಿಳಿಸಿ ಅನುಷ್ಟಾನಗೊಳಿಸುವ ಮತ್ತು ಮೇಲ್ವಿಚಾರಣೆ ನಡೆಸು ವಗುರುತರವಾದ ಜವಾಬ್ದಾರಿಯನ್ನು ಹೊಂದಿರುತ್ತದೆ.

ಸದರಿ ಹುದ್ದೆಗಳಿಗೆ ಸ್ಥಳ ನಿಯುಕ್ತಿಯಾದವರು ಸರ್ಧಾತ್ಮಕ ಪರೀಕ್ಷೆಯ ಮೂಲಕ ಸ್ವ-ಇಚ್ಚೆಯಿಂದ ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಂಡಿ ರುತ್ತಾರೆ ಇವರ ಕರ್ತವ್ಯದ ಅವಧಿ ಕನಿಷ್ಟ-3 ವರ್ಷ ಹಾಗೂ ಗರಿಷ್ಟ-5 ವರ್ಷಗಳಾಗಿರುತ್ತದೆ.

ಈ ನೌಕರರು ಶೈಕ್ಷಣಿಕ ಗುಣಮಟ್ಟವನ್ನು ಕಾಯ್ದು ಕೊಳ್ಳುವ ನಿಟ್ಟಿನಲ್ಲಿ ಇಲಾಖೆಯ ಪ್ರೋತ್ಸಾಹದಾಯಕ ಯೋಜನೆಯ ಮತ್ತು ಶೈಕ್ಷಣಿಕ ಕಾರ್ಯ ಚಟುವಟಿಕೆಗ ಳನ್ನು ಪರಿಣಾಮಕಾರಿ ಯಾಗಿ ಕ್ಲಸ್ಟರ್ ಮತ್ತು ಬ್ಲಾಕ್ ಹಂತಗಳಲ್ಲಿ ಅನುಷ್ಠಾನಗೊಳಿಸುವುದರ ಜೊತೆಯಲ್ಲಿ ಇಲಾಖೆಯ ಇನ್ನಿತರೆ ಅಭಿವೃದ್ಧಿ ಕಾರ್ಯಗಳಲ್ಲಿ ಸಕ್ರಿಯ ವಾಗಿ ಕಾರ್ಯ ನಿರ್ವಹಿಸುವ ಹೊಣೆಗಾರಿಕೆ ಇರುತ್ತದೆ

ಆದ್ದರಿಂದ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮತ್ತು ಇನ್ನಿತರೆ ಯಾವುದೇ ಸಂಘ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧಿಸಲು, ಚುನಾವಣೆಯ ಪ್ರಚಾರದಲ್ಲಿ ಭಾಗವಹಿ ಸುವುದು ಮತ್ತು ಯಾವುದೇ ಸಂಘ ಸಂಸ್ಥೆಯ ಪದಾಧಿಕಾರಿ ನಾಮ ನಿರ್ದೇಶಿತ ಸದಸ್ಯ, ಪದಾಧಿ ಕಾರಿಯಾಗಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ. ಅರ್ಹತೆ ಇದ್ದಲ್ಲಿ ಕೇವಲ ಚುನಾವಣೆಯಲ್ಲಿ ಮತದಾನ ಮಾಡಲು ಮಾತ್ರಅವಕಾಶವಿದೆ ಎಂದು ಸ್ಪಷ್ಟಪಡಿಸಿ ದ್ದಾರೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..


Google News

 

 

WhatsApp Group Join Now
Telegram Group Join Now
Suddi Sante Desk