ಮಂಗಳೂರು –
ಹೌದು ಮಹಾನಗರ ಪಾಲಿಕೆಯ ಆಯುಕ್ತರ ನಿವಾಸದ ಮೇಲೆ ಲೋಕಾಯುಕ್ತ ದಾಳಿ ನಡೆದ ಘಟನೆ ಮಂಗಳೂರಿನಲ್ಲಿ ನಡೆದಿದೆ.ದಾಳಿಯ ವೇಳೆ 2.77 ಕೋಟಿ ಮೌಲ್ಯದ ಆಸ್ತಿ ಪತ್ತೆಯಾಗಿದೆ. ಇದರೊಂದಿಗೆ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಲೋಕಾಯುಕ್ತ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ., ಮಹಾನಗರ ಪಾಲಿಕೆ ಆಯುಕ್ತ ಸಿ.ಎಲ್.ಆನಂದ್ ಅವರ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ 2.77 ಕೋಟಿ ಮೌಲ್ಯದ ಆಸ್ತಿಯನ್ನು ಪತ್ತೆ ಹಚ್ಚಿದ್ದಾರೆ.
ಮಂಗಳೂರಿನ ಮಣ್ಣಗುಡ್ಡದಲ್ಲಿರುವ ಆಯುಕ್ತರ ಸರ್ಕಾರಿ ಬಂಗಲೆಗೆ ಆಗಮಿಸಿದ ಲೋಕಾಯುಕ್ತ ತಂಡ ನಾಲ್ಕು ಗಂಟೆಗಳ ಕಾಲ ಪರಿಶೀಲನೆ ನಡೆಸಿತು. ಪರಿಶೀಲನೆಯ ವೇಳೆ ಸುಮಾರು 2.77 ಕೋಟಿ ಮೌಲ್ಯದ ಆಸ್ತಿಯನ್ನು ಪತ್ತೆ ಹಚ್ಚಿದ್ದಾರೆ,ಆನಂದ್ ಅವರಿಗೆ ಸಂಬಂಧಿಸಿದ ನಿವಾಸ, ಕಚೇರಿ ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿ ದಾಳಿ ಸಂದರ್ಭದಲ್ಲಿ 3 ಮನೆಗಳು, 4 ಎಕರೆ ಕೃಷಿ ಭೂಮಿ, 2.12 ಕೋಟಿ ಮೌಲ್ಯದ ಸ್ಥಿರಾಸ್ತಿ, 19.4 ಲಕ್ಷ ಮೌಲ್ಯದ ಚಿನ್ನಾಭರಣ, 20.5 ಲಕ್ಷ ಮೌಲ್ಯದ ವಾಹನ,
ಆಸ್ತಿ ಖರೀದಿಗೆ 10 ಲಕ್ಷ ಮುಂಗಡ, ಪತ್ನಿ ಮತ್ತು ಮಕ್ಕಳ ಹೆಸರಿನಲ್ಲಿ 16 ಲಕ್ಷ ಮೌಲ್ಯದ ಆಸ್ತಿ ಇದೆ ಎಂದು ಪತ್ತೆ ಹಚ್ಚಿದ್ದು ಸಧ್ಯ ಲೋಕಾಯುಕ್ತ ಅಧಿಕಾರಿಗಳು ಈ ಒಂದು ಕುರಿತಂತೆ ತನಿಖೆಯನ್ನು ಮಾಡ್ತಾ ಇದ್ದಾರೆ.
ಸುದ್ದಿ ಸಂತೆ ನ್ಯೂಸ್ ಮಂಗಳೂರು…..