ಬೆಂಗಳೂರು –
ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದ್ದು ತುಟ್ಟಿಭತ್ಯೆಯನ್ನು’ ಶೇ.2.25% ರಷ್ಟು ಹೆಚ್ಚಳ ಮಾಡಿ ಸರ್ಕಾರ ಆದೇಶವನ್ನು ಮಾಡಿದೆ.ಹೌದು ರಾಜ್ಯ ಸರ್ಕಾರವು ಸರ್ಕಾರಿ ನೌಕರರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ತುಟ್ಟಿ ಭತ್ಯೆಯ ದರಗಳನ್ನು 1ನೇ ಜುಲೈ 2024 ರಿಂದ ಜಾರಿಗೆ ಬರುವಂತೆ ಪ್ರಸ್ತುತ ಮೂಲ ವೇತನದ 8.50% ರಿಂದ 10.75% ಕ್ಕೆ ಪರಿಷ್ಕರಿಸಿ ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದಿಂದ ರಚಿಸಲ್ಪಟ್ಟ 7ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳ ಬೆಳಕಿನಲ್ಲಿ ವೇತನ ಶ್ರೇಣಿ ಗಳು ಮತ್ತು ಪಿಂಚಣಿ ಪರಿಷ್ಕರಣೆ ಕುರಿತ ವೇತನ ಆಯೋಗದ ಶಿಫಾರಸ್ಸುಗಳನ್ನು ಅನುಷ್ಠಾನಗೊಳಿಸಲು ನೀತಿ ನಿರ್ಣಯವನ್ನು ಕೈಗೊಳ್ಳಲಾಗಿರುತ್ತದೆ. ಅದರಂತೆ, ಕ್ರಮವಾಗಿ ಮೇಲೆ (1) ಮತ್ತು (2)ರಲ್ಲಿ 23.08.2024 ಮತ್ತು 28.08.2024ರ ಸರ್ಕಾರಿ ಆದೇಶಗಳಲ್ಲಿ 2024ರ ಪರಿಷ್ಕೃತ ವೇತನ ಶ್ರೇಣಿಗಳನ್ನು ಮತ್ತು ಪರಿಷ್ಕೃತ ಪಿಂಚಣಿಯನ್ನು 01.08.2024ರಿಂದ ಅನ್ವಯವಾಗುವಂತೆ ಅನುಷ್ಠಾನಗೊಳಿಸಿ ವಿಸ್ತ್ರತವಾದ ಅದೇಶಗಳನ್ನು ಹೊರಡಿಸಲಾಗಿದೆ.
ದಿನಾಂಕ: 23.08.2024ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರು ಮತ್ತು ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರಿಗೆ ತುಟ್ಟಿ ಭತ್ಯೆ ಮಂಜೂರಾತಿಯನ್ನು ಕ್ರಮಬದ್ಧಗೊಳಿಸುವ ಬಗ್ಗೆ ಅವಕಾಶಗಳನ್ನು ಕಲ್ಪಿಸಲಾಗಿದೆ.ಮೇಲೆ ಕ್ರಮ ಸಂಖ್ಯೆ (3) ಮತ್ತು (4)ರಲ್ಲಿ ಓದಲಾದ ಆದೇಶಗಳಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ ಮಂಜೂರು ಮಾಡಿರುವ ಭಾರತ ಸರ್ಕಾರದ ಆದೇಶಗಳನ್ನು ರಾಜ್ಯ ಸರ್ಕಾರವು ಪರಿಗಣಿಸಿರುತ್ತದೆ.
2024ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ರಾಜ್ಯ ಸರ್ಕಾರಿ ನೌಕರರುಗಳಿಗೆ ನೀಡಲಾಗುತ್ತಿರುವ ತುಟ್ಟಿ ಭತ್ಯೆಯ ದರ ಗಳನ್ನು 1ನೇ ಜುಲೈ 2024 ರಿಂದ ಜಾರಿಗೆ ಬರುವಂತೆ ಪ್ರಸ್ತುತ ಮೂಲ ವೇತನದ 8.50% ರಿಂದ 10.75% ಕ್ಕೆ ಪರಿಷ್ಕರಿಸಿ ಹೆಚ್ಚಳ ಮಾಡಲು ಸರ್ಕಾರವು ಹರ್ಷಿಸುತ್ತದೆ ಆದರೆ, ಪರಿಷ್ಕೃತ ತುಟ್ಟಿ ಭತ್ಯೆಯ ದರಗಳ ಅರ್ಥಿಕ ಲಾಭವು ದಿನಾಂಕ: 01.08.2024 ರಿಂದ ಲಭ್ಯವಾಗು ತ್ತದೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..