ಧಾರವಾಡ –
ಚಾಕುವಿನಿಂದ ಇರಿದು ವ್ಯಕ್ತಿ ಯೊಬ್ಬನನ್ನು ಭೀಕರ ವಾಗಿ ಹತ್ಯೆ ಮಾಡಿದ ಘಟನೆ ಧಾರವಾಡ ದ ಗರಗ ಗ್ರಾಮದಲ್ಲಿ ನಡೆದಿದೆ.ಹೌದು ಮನೆ ಮುಂದೆ ಬೈಕ್ ನಿಲ್ಲಿಸಿ ಒಳಗಡೆ ತೆರಳುತ್ತಿದ್ದವನ ಮೇಲೆ ಹಾಡಹಗಲೇ ಏಕಾಏಕಿ ದಾಳಿ ಮಾಡಿದ ದುಷ್ಕರ್ಮಿಗಳು ಚಾಕುವಿಂದ ಇರಿದು ಕೊಲೆ ಮಾಡಿದ್ದಾರೆ
ಗರಗ ಗ್ರಾಮದ ಗಿರೀಶ್ ಕರಡಿಗುಡ್ಡ (40) ಕೊಲೆಯಾ ದವನಾಗಿದ್ದು ಗಿರೀಶ್ ತಮ್ಮ ಮನೆ ಮುಂದೆ ಬೈಕ್ ನಿಲ್ಲಿಸಿ ಒಳಹೋಗುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ದಾಳಿ ನಡೆಸಿದ ದುಷ್ಕರ್ಮಿಗಳು ಗಿರೀಶ ಅವರನ್ನು ಚಾಕುವಿ ನಿಂದ ಇರಿದು ಕೊಲೆ ಮಾಡಿದ್ದಾರೆ. ಈ ಘಟನೆ ನಡೆದ ಕೆಲ ಗಂಟೆಗಳ ನಂತರ ಗಿರೀಶ್ ಕೊಲೆಯಾಗಿರುವುದು ಅವರ ಪತ್ನಿಗೆ ಗೊತ್ತಾಗಿದೆ.ಆ ಕೂಡಲೇ ಗರಗ ಠಾಣೆಗೆ ದೂರು ನೀಡಿದ್ದು,
ಘಟನಾ ಸ್ಥಳಕ್ಕೆ ಗರಗ ಠಾಣೆ ಪೊಲೀಸರು ಮತ್ತು ಡಿವೈಎಸ್‌ಪಿ ಭೇಟಿ ನೀಡಿ ಪರಿಶೀಲನೆ ಕೈಗೊಂಡಿದ್ದಾರೆ. ಹತ್ಯೆ ಮಾಡಿದವರು ಯಾರು? ಯಾವ ಉದ್ದೇಶಕ್ಕಾಗಿ ಹತ್ಯೆ ಮಾಡಲಾಗಿದೆ ಎಂಬ ಮಾಹಿತಿಯನ್ನು ಗರಗ ಪೊಲೀಸರು ಕಲೆಹಾಕುತ್ತಿದ್ದಾರೆ.ಇನ್ನೂ ಗಿರೀಶ್ ಸಣ್ಣ ಪುಟ್ಟ ರಿಯಲ್ ಎಸ್ಟೇಟ್ ಕೆಲಸ ಹಾಗೂ ಕಾರುಗಳ ಕೊಡಿಸುವ ಮತ್ತು ತೆಗೆದುಕೊಳ್ಳುವ ಕೆಲಸ ಮಾಡುತ್ತಿ ದ್ದರು ಎಂದು ತಿಳಿದು ಬಂದಿದ್ದು ಪೊಲೀಸರು ತನಿಖೆ ಮಾಡ್ತಾ ಇದ್ದಾರೆ.
ಸುದ್ದಿ ಸಂತೆ ನ್ಯೂಸ್ ಗರಗ…..






















