ಬೆಂಗಳೂರು –
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ 2024-2029ನೇ ಅವಧಿಗೆ ಚುನಾವಣೆ ಘೋಷ ಣೆಯಾಗಿದ್ದು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹಾಲಿ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹಾಗೂ ರಾಜ್ಯ ಖಜಾಂಚಿ ಹುದ್ದೆಗೆ ಕೊಪ್ಪಳ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಉಪಾಧ್ಯಕ್ಷರಾದ ನಾಗರಾಜ ಜುಮ್ಮನ್ನವರ ರಾಜ್ಯ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.
ಡಿ.8ರಂದು ನಡೆದ ಸಮಾಲೋಚನಾ ಸಭೆಯಲ್ಲಿ ಹಾಜರಿದ್ದ ಸುಮಾರು 850ಕ್ಕೂ ಹೆಚ್ಚು ಮತದಾ ರರು ರಾಜ್ಯಾಧ್ಯಕ್ಷ ಸ್ಥಾನಕ್ಕೆ ಸಿ.ಎಸ್.ಷಡಾಕ್ಷರಿ ಹಾಗೂ ರಾಜ್ಯ ಖಜಾಂಚಿ ಹುದ್ದೆಗೆ ಕೊಪ್ಪಳ ಜಿಲ್ಲಾಧ್ಯಕ್ಷರಾದ ನಾಗರಾಜ ಜುಮ್ಮನ್ನವರ ಅವರ ಹೆಸರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿತ್ತು
ಹೀಗಾಗಿ ರಾಜ್ಯದ ಜಿಲ್ಲೆ, ತಾಲೂಕು, ಯೋಜನಾ ಘಟಕ ಮತ್ತು ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ಸಮ್ಮುಖದಲ್ಲಿ ಅಧ್ಯಕ್ಷ ಅಭ್ಯರ್ಥಿ ಸಿ.ಎಸ್.ಷಡಾಕ್ಷರಿ ಮತ್ತು ಉಪಾಧ್ಯಕ್ಷ ಅಭ್ಯರ್ಥಿ ನಾಗರಾಜ ಜುಮ್ಮನ್ನವರ ನಾಮಪತ್ರ ಸಲ್ಲಿಸಿದರು.ಈ ವೇಳೆ ಹಲವಾರು ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು, ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರು ಭಾಗವಹಿಸಿ ಶುಭ ಹಾರೈಸಿ ದರು. ಡಿ.27ರಂದು ರಾಜ್ಯಾಧ್ಯಕ್ಷರು ಮತ್ತು ಖಜಾಂಚಿ ಸ್ಥಾನದ ಚುನಾವಣೆ ನಡೆಯಲಿದ್ದು, ಅಂದೇ ಫಲಿತಾಂಶ ಘೋಷಣೆಯಾಗಲಿದೆ.
ಇನ್ನು ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಸ್ಥಾನಕ್ಕೆ ಡಿ.4ರಂದು ನಡೆದ ಚುನಾವಣೆಯಲ್ಲಿ ಹಾಲಿ ರಾಜ್ಯಾಧ್ಯಕ್ಷರಾದ ಸಿ.ಎಸ್. ಷಡಾಕ್ಷರಿ ಅವರ ಬಣ ಮೇಲುಗೈಯನ್ನು ಸಾಧಿಸಿದೆ
ಜಿಲ್ಲಾಧ್ಯಕ್ಷರು ಹಾಗೂ ಪದಾಧಿಕಾರಿಗಳ ಸ್ಥಾನಕ್ಕೆ ನ. 27ರಂದು 13 ಜಿಲ್ಲೆಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದು, ಡಿ.4ರಂದು ನಡೆದ ಉಳಿದ 18 ಜಿಲ್ಲೆಗಳ ಜಿಲ್ಲಾಧ್ಯಕ್ಷರ ಹಾಗೂ ಪದಾಧಿಕಾರಿಗಳ ಚುನಾವಣೆಯಲ್ಲಿ ಅಧ್ಯಕ್ಷರು ಆಯ್ಕೆಯಾಗಿದ್ದಾರೆ ಒಟ್ಟು 31 ಜಿಲ್ಲೆಗಳಲ್ಲಿ ನಡೆದ ಚುನಾವಣೆಯಲ್ಲಿ 27 ಜಿಲ್ಲೆಗಳಲ್ಲಿ ಸಿ.ಎಸ್. ಷಡಾಕ್ಷರಿ ಅವರ ಬಣ ಜಯಭೇರಿ ಬಾರಿಸಿದೆ.
ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ 102 ಸ್ಥಾನಗಳಿಗೆ ಚುನಾವಣೆ ನಡೆದಿದ್ದು, 95 ಸ್ಥಾನಗಳಲ್ಲಿ ಸಿ.ಎಸ್. ಷಡಾಕ್ಷರಿ ಅವರ ಬಣ ಜಯಭೇರಿ ಬಾರಿಸುವ ಮೂಲಕ ಮೇಲುಗೈ ಸಾಧಿಸಿದೆ. ನ.9ರಂದು ರಿಂದ ರಾಜ್ಯಾಧ್ಯಕ್ಷ ಹಾಗೂ ರಾಜ್ಯ ಖಜಾಂಚಿ ಸ್ಥಾನದ ಚುನಾವಣೆಯ ಪ್ರಕ್ರಿಯೆಗಳು ಪ್ರಾರಂಭವಾಗಿ, ಡಿ.27ರಂದು ಮತದಾನ ನಡೆಯಲಿದೆ
ಕೇಂದ್ರ ಸಂಘದ ಪದಾಧಿಕಾರಿಗಳ ಚುನಾವಣೆ ಯಲ್ಲಿ ಜಿಲ್ಲೆ, ತಾಲೂಕು, ಯೋಜನೆ ಶಾಖೆಗಳ ಪದಾಧಿಕಾರಿ ಗಳು ಹಾಗೂ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರು ಸೇರಿ ಅಂದಾಜು 950ಕ್ಕೂ ಹೆಚ್ಚು ಮತದಾರರು ಚುನಾವಣೆಯಲ್ಲಿ ಪಾಲ್ಗೊಳಲಿದ್ದಾರೆ ಈ ಪೈಕಿ ಸುಮಾರು 95% ಕ್ಕಿಂತ ಹೆಚ್ಚು ಮತದಾರರು ಸಿ.ಎಸ್. ಷಡಾಕ್ಷರಿ ರವರ ಬಣದಿಂದ ಆಯ್ಕೆಯಾಗಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..