ಕೋಲಾರ –
ಮುರುಡೇಶ್ವರದ ಸಮುದ್ರದಲ್ಲಿ ಮುಳುಗಿ ಕಣ್ಮರೆ ಯಾಗಿರುವ ಮುಳಬಾಗಿಲು ತಾಲ್ಲೂಕಿನ ಎಂ.ಕೊತ್ತೂರು ಬಳಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮೂವರು ವಿದ್ಯಾರ್ಥಿನಿಯರ ದೇಹ ಪತ್ತೆಗೆ ಶೋಧ ಕಾರ್ಯಾಚರಣೆ ಮುಂದುವರಿದಿದೆ.ಶೈಕ್ಷಣಿಕ ಪ್ರವಾಸ ಕ್ಕೆಂದು ಮುರುಡೇಶ್ವರಕ್ಕೆ ತೆರಳಿದ್ದು, ಒಬ್ಬ ವಿದ್ಯಾರ್ಥಿನಿ ಮಂಗಳವಾರ ಸಮುದ್ರದಲ್ಲಿ ಮುಳುಗಿ ಮೃತಪಟ್ಟಿ ದ್ದಳು.ಮೂವರು ವಿದ್ಯಾರ್ಥಿನಿಯರು ಕಣ್ಮರೆಯಾಗಿ ದ್ದಾರೆ. ಇನ್ನು ಮೂವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯು ತ್ತಿದ್ದಾರೆ.
ಶ್ರಾವಂತಿ ಗೋಪಾಲಪ್ಪ (15) ಮೃತ ವಿದ್ಯಾರ್ಥಿನಿ. ವಿದ್ಯಾರ್ಥಿನಿಯರಾದ ದೀಕ್ಷಾ ಜೆ. (15), ಲಾವಣ್ಯ (15) ಹಾಗೂ ವಂದನಾ (15) ಕಣ್ಮರೆ ಆಗಿದ್ದಾರೆ. ಯಶೋದಾ (15), ವೀಕ್ಷಣಾ (15) ಹಾಗೂ ಲಿಪಿಕಾ (15) ಮುರುಡೇ ಶ್ವರದ ಆರ್‌ಎನ್‌ಎಸ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯು ತ್ತಿರುವ ವಿದ್ಯಾರ್ಥಿನಿಯರು. ಎಲ್ಲರೂ 9ನೇ ತರಗತಿ ಯಲ್ಲಿ ಓದುತ್ತಿದ್ದಾರೆ.
ಇನ್ನೂ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ವಸತಿ ಶಾಲೆಯ ಪ್ರಾಂಶುಪಾಲೆ ಶಶಿಕಲಾ ಹಾಗೂ ಅತಿಥಿ ಶಿಕ್ಷಕರನ್ನು ಅಮಾನತುಗೊಳಿಸಿ ತನಿಖೆಗೆ ಆದೇಶಿ ಸಲಾಗಿದೆ.ಮೃತರ ಕುಟುಂಬಕ್ಕೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದಿಂದ (ಕ್ರೈಸ್) ₹ 5 ಲಕ್ಷ ಪರಿಹಾರ ಘೋಷಿಸಲಾಗಿದೆ.
ವಸತಿ ಶಾಲೆಯ 46 ವಿದ್ಯಾರ್ಥಿಗಳು ಹಾಗೂ 8 ಶಿಕ್ಷಕರು ಸೇರಿದಂತೆ 54 ಮಂದಿ ಭಾನುವಾರ ಸಂಜೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ಮುರುಡೇಶ್ವರಕ್ಕೆ ಪ್ರವಾಸ ತೆರಳಿದ್ದರು.
ಸುದ್ದಿ ಸಂತೆ ನ್ಯೂಸ್ ಕೋಲಾರ……