ಗಂಗಾವತಿ –
ರಾಜ್ಯದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ ಎಸ್.ಎಂ. ಕೃಷ್ಣ ನಿಧನದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೂರು ದಿನಗಳ ಕಾಲ ಶೋಕಾಚರಣೆ ಆದೇಶ ವನ್ನು ಜಾರಿ ಮಾಡಿದ್ದು ಸರ್ಕಾರಿ ಕಚೇರಿಗಳಲ್ಲಿ 3 ದಿನಗಳ ಕಾಲ ನಿತ್ಯವೂ ಅರ್ಧಕ್ಕೆ ಧ್ವಜಾರೋಹಣ ಮಾಡುವಂತೆ ಸೂಚನೆ ನೀಡಿದೆ.ಗಂಗಾವತಿ ನಗರದ ಮತ್ತು ತಾಲೂಕಿನ ಬಹುತೇಕ ಸರಕಾರಿ ಕಚೇರಿಗಳಲ್ಲಿ ರಾಷ್ಟ್ರ ಧ್ವಜವನ್ನು ಅರ್ಧಕ್ಕೆ ಏರಿಸಲಾಗಿದೆ
ಆದರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ಅರ್ಧಕ್ಕೆ ರಾಷ್ಟ್ರ ಧ್ವಜಾರೋಹಣ ಮಾಡದೇ ಬಿಇಓ ಅವರು ನಿರ್ಲಕ್ಷ್ಯ ತೋರಿದ್ದಾರೆ.ಇದನ್ನು ಖಂಡಿಸಿ ಎಸ್.ಎಫ್.ಐ. ಕಾರ್ಯಕರ್ತರು ಕಚೇರಿ ಎದುರು ಪ್ರತಿಭಟನೆ ನಡೆಸಿ ಬಿಇಓ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಜೊತೆಗೆ ರಾಷ್ಟ್ರಧ್ವಜವನ್ನು ಅರ್ಧಕ್ಕೇರಿಸುವ ಮೂಲಕ ಗೌರವ ಸಲ್ಲಿಸುವಂತೆ ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಎಸ್.ಎಫ್.ಐ. ಮುಖಂಡ ಗ್ಯಾನೇಶ್ ಕಡಗದ ಮಾತನಾಡಿ, ಎಸ್.ಎಂ. ಕೃಷ್ಣ ಅವರು ರಾಜ್ಯ ಕಂಡ ಅಪರೂಪದ ಮುಖ್ಯಮಂತ್ರಿಯಾಗಿದ್ದರು. ಸರಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸುವ ದೃಷ್ಟಿಯಿಂದ ಮಧ್ಯಾಹ್ನದ ಬಿಸಿ ಊಟ ಆರಂಭಿಸಿದ ಕ್ರಾಂತಿಕಾರಕ ಮುಖಂಡರಾಗಿದ್ದು, ಅವರ ಗೌರವಾರ್ಥ ವಾಗಿ ಇಡೀ ರಾಷ್ಟ್ರದಲ್ಲಿ ಗೌರವ ಸಲ್ಲಿಸಲಾಗುತ್ತಿದ್ದು,
ರಾಜ್ಯದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ನಡೆಸಿ ರಾಷ್ಟ್ರಧ್ವಜವನ್ನು ಅರ್ಧಕ್ಕೆ ಏರಿಸಲಾಗಿದೆ. ಗಂಗಾವತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಪ್ರಭಾರಿ ಬಿಈಓ ಮಂಜುನಾಥ ವಸ್ತ್ರದ್ ಅವರು ತಮಗೆ ಆದೇಶ ಬಂದಿಲ್ಲ ಎಂದು ರಾಷ್ಟ್ರಧ್ವಜವನ್ನು ಅರ್ಧಕ್ಕೆ ಏರಿಸದೆ ಅಗೌರವ ತೋರಿಸಿರುವುದು ಖಂಡನೀಯ ವಾಗಿದೆ.
ಕೂಡಲೇ ಶಿಕ್ಷಣ ಇಲಾಖೆಯ ಸಚಿವರು ವಸ್ತ್ರದ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು ಕೂಡಲೇ ರಾಷ್ಟ್ರ ಧ್ವಜವನ್ನು ಅರ್ಧಕ್ಕೆ ಏರಿಸಿ ಎಸ್‌ಎಂ ಕೃಷ್ಣ ಅವರಿಗೆ ಗೌರವ ಸಮರ್ಪಣೆ ಮಾಡುವಂತೆ ಒತ್ತಾಯಿಸಿದರು.
ಸುದ್ದಿ ಸಂತೆ ನ್ಯೂಸ್ ಗಂಗಾವತಿ…..