ಕಂಪ್ಲಿ –
ಶಾಲೆಯಿಂದ ದೂರಳಿದ 15 ಕ್ಕೂ ಹೆಚ್ಚು ಮಕ್ಕಳನ್ನು ಮರಳಿ ಶಾಲೆಗೆ ಸೇರಿಸಲಾಯಿತು ಹೌದು ಕಂಪ್ಲಿ ತಾಲ್ಲೂಕಿನ ಎಮ್ಮಿಗನೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರು ಶಾಲೆ ಬಿಟ್ಟ ಮಕ್ಕಳ ಮನೆಗಳಿಗೆ ಭೇಟಿ ನೀಡಿ ಪಾಲಕರಲ್ಲಿ ಜಾಗೃತಿ ಮೂಡಿಸಿದರು.
ಸಹ ಶಿಕ್ಷಕ ಕೆ.ವೈ. ಪಾಂಡುರಂಗ ಮತ್ತು ಅತಿಥಿ ಶಿಕ್ಷಕ ಶಿವನೇಗೌಡ ರಾಮಪ್ಪ ಅವರು ಶಾಲೆ ಬಿಟ್ಟ ಮಕ್ಕಳ 25 ಮನೆಗಳಿಗೆ ಭೇಟಿ ನೀಡಿ, 15 ಮಕ್ಕಳನ್ನು ಮರಳಿ ಶಾಲೆಗೆ ಕರೆತರುವಲ್ಲಿ ಯಶಸ್ವಿಯಾಗಿದ್ದಾರೆ.ಪಾಲಕರು ತಮ್ಮ ಮಕ್ಕಳನ್ನು ತಪ್ಪದೇ ಶಾಲೆಗೆ ಕಳುಹಿಸುವ ಜೊತೆಗೆ ಅವರ ಶೈಕ್ಷಣಿಕ ಚಟುವಟಿಕೆಗಳ ಬಗ್ಗೆ ಗಮನಹರಿ ಸಬೇಕು.
ತಿಂಗಳಿಗೊಮ್ಮೆ ಶಾಲೆಗೆ ಭೇಟಿ ನೀಡಿ, ಮಕ್ಕಳ ಪ್ರಗತಿ ಕುರಿತು ಸಂಬಂಧಿಸಿದ ಶಿಕ್ಷಕರಿಂದ ಮಾಹಿತಿ ಪಡೆಯುವಂತೆ ಪಾಲಕರಿಗೆ ತಿಳಿವಳಿಕೆ ನೀಡಿದ್ದಾಗಿ ಶಿಕ್ಷಕರು ಹೇಳಿದರು.ಶಾಲೆಬಿಟ್ಟ ಮಕ್ಕಳನ್ನು ಮುಖ್ಯವಾಹಿನಿಗೆ ತರಲು ನಿರಂತರ ಪ್ರಯತ್ನ ನಡೆಸುತ್ತಿದ್ದೇವೆ ಎಂದು ಮುಖ್ಯಶಿಕ್ಷಕ ಬಿ.ಎಸ್. ಸದ್ಯೋಜಾತಪ್ಪ ತಿಳಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಕಂಪ್ಲಿ……