ಗದಗ –
ರೊಟ್ಟಿ ಮಾಡುವ ಕ್ವಾಮಣಗಿಯಿಂದ ತಲೆಗೆ ಹೊಡೆದು ಮುಖ್ಯ ಶಿಕ್ಷಕಿಯನ್ನು ಹತ್ಯೆ ಮಾಡಿರುವ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ನವನಗರದಲ್ಲಿ ನಡೆದಿದೆ. ಅನ್ನಪೂರ್ಣ ರಾಠೋಡ್ (55)ಕೊಲೆಯಾದ ಮೃತ ಮುಖ್ಯ ಶಿಕ್ಷಕಿಯಾಗಿದ್ದು ಗಜೇಂದ್ರಗಡ ತಾಲೂಕಿನ ರೋಣದ ಬಿಇಒ ಕಚೇರಿಯಲ್ಲಿ ಪ್ರಭಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.ಮನೆಯಲ್ಲಿದ್ದ ಮುಖ್ಯ ಶಿಕ್ಷಕಿಯ ತಲೆಗೆ ದುಷ್ಕರ್ಮಿಗಳು ರೊಟ್ಟಿ ಮಾಡುವ ಕಟ್ಟಿಗೆಯ ಕ್ವಾಮಣಗಿಯಿಂದ ಹೊಡೆದು ಭೀಕರ ಕೊಲೆ ಮಾಡಲಾಗಿದ್ದು,
ಇದನ್ನು ಕಂಡ ಗಜೇಂದ್ರಗಡ ನಿವಾಸಿಗಳು ಆತಂಕ ಗೊಂಡಿದ್ದಾರೆ. ಇನ್ನೂ ಸ್ಥಳಕ್ಕೆ ಗಜೇಂದ್ರಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಘಟನೆ ಸಂಬಂಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ಕೈಗೊಂಡಿ ದ್ದಾರೆ.
ಸುದ್ದಿ ಸಂತೆ ನ್ಯೂಸ್ ಗದಗ…..