ಬೆಳಗಾವಿ –
ಕಾಂಗ್ರೆಸ್ ಪಕ್ಷದಿಂದ ಬೆಳಗಾವಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆ ಅದ್ಧೂರಿ ಯಾಗಿ ನಡೆಯಲಿದ್ದು ಈ ಒಂದು ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆಯನ್ನು ಮಾಡಲಾಗಿದೆ ಹೌದು ಕಾಂಗ್ರೆಸ್ ಪಕ್ಷದ ಗಣ್ಯರು ಬೆಳಗಾವಿಗೆ ಆಗಮಿಸ ಲಿದ್ದಾರೆ. ಶುಕ್ರವಾರ ಬೆಳಗಾವಿ ರಾಷ್ಟ್ರೀಯ ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ಆಚರಣೆ ಕಾರ್ಯಕ್ರಮ ನಡೆಯಲಿದೆ. ಈ ಐತಿಹಾಸಿಕ ಕಾರ್ಯಕ್ರಮಕ್ಕೆ ಕುಂದಾ ನಗರಿಯಲ್ಲಿ ಭರದ ಸಿದ್ಧತೆ ನಡೆದಿದೆ.
ಬೆಳಗಾವಿಯಲ್ಲಿ ಎರಡು ದಿನ ಗಾಂಧಿ ಭಾರತ ಅದ್ಧೂರಿ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಬೆಳಗಾವಿ ತಾಲೂಕಿನಲ್ಲಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಡಿಸೆಂಬರ್ 26 ಮತ್ತು 27 ರಂದು ಎರಡು ದಿನ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ. ಬೆಳಗಾವಿ ನಗರ ಮತ್ತು ಗ್ರಾಮೀಣ ಭಾಗದ ಅಂಗನ ವಾಡಿ ಕೇಂದ್ರಗಳಿಗೂ ರಜೆ ಘೋಷಿಸಲಾಗಿದೆ.
ಬೆಳಗಾವಿ ನಗರದ ಸಿಪಿಎಡ್ ಮೈದಾನದಲ್ಲಿ ಡಿಸೆಂಬರ್ 27ರಂದು ನಡೆಯಲಿರುವ ಈ ಬೃಹತ್ ಸಮಾವೇಶದಲ್ಲಿ ಗೋವಾ, ಮಹಾರಾಷ್ಟ್ರ, ಆಂಧ್ರಪ್ರದೇಶ, ತೆಲಂಗಾಣ, ಕೇರಳ, ತಮಿಳುನಾಡು ಸೇರಿ ವಿವಿಧ ರಾಜ್ಯಗಳ ಹಲವು ಜಿಲ್ಲೆಗಳಿಂದ ಅಂದಾಜು 1.50 ಲಕ್ಷ ಜನರು ಆಗಮಿ ಸುವ ನಿರೀಕ್ಷೆ ಇದ್ದು, ದೂರದ ಊರುಗಳಿಂದ ಬರುವ ವರಿಗೆ ಬೆಳಗಿನ ಉಪಹಾರ, ಮಧ್ಯಾಹ್ನ ಊಟದ ವ್ಯವಸ್ಥೆ ಹಾಗೂ 5 ಸಾವಿರಕ್ಕೂ ಅಧಿಕ ಜನರಿಗೆ ವಸತಿ ವ್ಯವಸ್ಥೆ ಮಾಡಲಾಗಿದೆ.
ಕಾಂಗ್ರೆಸ್ ಕಾರ್ಯಕಾರಿ ಸಭೆಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದೆ ಪ್ರಿಯಾಂಕಾ ಗಾಂಧಿ, ನಾಲ್ಕು ರಾಜ್ಯದ ಮುಖ್ಯಮಂತ್ರಿಗಳು, 150 ಸಂಸದರು ಸೇರಿ ಸುಮಾರು 215 ಗಣ್ಯರು ಆಗಮಿಸಲಿದ್ದು ಅವರಿಗೆ ವಿಶೇಷ ಆತಿಥ್ಯ ನೀಡಲಾಗುತ್ತಿದೆ.
ರಾಜ್ಯ ಸರ್ಕಾರದ ಹತ್ತು ಸಚಿವರಿಗೆ ಉಸ್ತುವಾರಿ ವಹಿಸ ಲಾಗಿದೆ ಈ ಎಲ್ಲಾ ನಾಯಕರ ಆಗಮನದ ಹಿನ್ನೆಲೆಯಲ್ಲಿ ಸರ್ಕಾರ ಭದ್ರತೆಗೆ 10 ಸಾವಿರ ಪೊಲೀಸರನ್ನು ನಿಯೋ ಜಿಸಿದೆ ನಾಳೆ ಗುರುವಾರ ಅಧಿಕೃತವಾಗೊ ಕಾರ್ಯಕ್ರಮ ಆರಂಭವಾಗಲಿದೆ. 1924ರಲ್ಲಿ ಮಹಾತ್ಮ ಗಾಂಧೀಜಿಯ ವರ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ ಡಿ. 26ರ ಮಧ್ಯಾಹ್ನ 3 ಗಂಟೆಗೆ ನಡೆದಿತ್ತು. 26ರಂದು ಅದೇ ಸಮಯಕ್ಕೆ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ಜರುಗಲಿದೆ.
ಸುದ್ದಿ ಸಂತೆ ನ್ಯೂಸ್ ಬೆಳಗಾವಿ…..