ಬೆಂಗಳೂರು –
ಜಮೀನು ವಿವಾದ ಹಿನ್ನೆಲೆಯಲ್ಲಿ ಸರ್ಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ನಡೆದಿದೆ.ಹೊಸಕೋಟೆಯ ಜಡಿಗೇನ ಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ನರಸಿಂಹ ಮೂರ್ತಿ ಆತ್ಮಹತ್ಯೆ ಮಾಡಿಕೊಂಡವರಾಗಿದ್ದಾರೆ
ಹೊಸಹಳ್ಳಿ ರಸ್ತೆಯಲ್ಲಿ ವಾಸಿಸುತ್ತಿದ್ದ ನರಸಿಂಹ ಮೂರ್ತಿ ಗುರುವಾರ ರಾತ್ರಿ ತನ್ನ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಅವರನ್ನು ನೇಣುಬಿಗಿದು ಸ್ಥಿತಿಯಲ್ಲಿ ನೋಡಿದ ಕುಟುಂಬದ ಪೋಷಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ರೂ.10 ಕೋಟಿ ಜಾಗದ ವಿಚಾರಕ್ಕೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.
ತುಂಗಾನಗರದಲ್ಲಿ ನರಸಿಂಹಮೂರ್ತಿ ಅವರಿಗೆ ಸೇರಿದ 25 ಗುಂಟೆ ಜಮೀನಿದ್ದು,ಅದನ್ನು ಅವರ ಸಂಬಂಧಿ ಸತೀಶ್ ಎಂಬವರು ಜಮೀನು ಖರೀದಿಸುವುದಾಗಿ ಹೇಳಿ ಅಗ್ರಿಮೆಂಟ್ ಹಾಕಿಸಿಕೊಂಡಿದ್ದರು ಆದರೆ, ಸತೀಶ್ ರೂ. 10 ಕೋಟಿ ಜಮೀನಿಗೆ ಕೇವಲ 10 ಲಕ್ಷ ಕೊಟ್ಟಿದ್ದು ಉಳಿದ ಹಣ ಕೊಡದೆ ಜಮೀನು ಲಪಟಾಯಿಸಿದ್ದಾರೆ.
ಹಣ ಕೇಳಲು ಹೋದಾಗ ಧಮ್ಕಿ ಹಾಕಿದ್ದಾರೆ ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಡೆತ್ ನೋಟ್ ನಲ್ಲಿ ಅವರು ಬರೆದಿಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದು ಸಧ್ಯ ಈ ಒಂದು ಕುರಿತು ದೂರು ದಾಖಲು ಮಾಡಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..