ಕೊರಟಗೆರೆ –
ಟಾಟಾ ಏಸ್ ವಾಹನ ಪಲ್ಟಿಯಾಗಿ 15 ಮಕ್ಕಳು ಗಾಯಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಶಾಲೆಯ ಮುಖ್ಯಶಿಕ್ಷಕ ಹಾಗೂ ಸಹ ಶಿಕ್ಷಕನನ್ನು ಕೊರಟಗೆರೆ ಕ್ಷೇತ್ರ ಶಿಕ್ಷಣಾಧಿಕಾರಿ ನಟರಾಜು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.ಕೊರಟಗೆರೆ ತಾಲೂಕಿನ ಹೊಳವನ ಹಳ್ಳಿ ಹೋಬಳಿಯ ಚಿಂಪುಗಾನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.3 ರಂದು 99 ಮಕ್ಕಳನ್ನು ಹೊರಸಂಚಾರ ಎಂದು ಶಾಲೆಯ ಮಕ್ಕಳನ್ನು ದೊಡ್ಡಸಾಗ್ಗೆರೆ ಬಳಿ ಇರುವ ಮಿನಿ ಲಾಲ್ ಬಾಗ್‌ಗೆ ಕರೆದುಕೊಂಡು ಹೋಗಲಾಗಿತ್ತು
ಬಳಿಕ ವಾಪಾಸ್ ಬರುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಟಾಟಾ ಏಸ್ ವಾಹನ ಪಲ್ಟಿಯಾಗಿದೆ ಪರಿಣಾಮ ಹದಿನೈದು ಮಕ್ಕಳಿಗೆ ಗಾಯಗಳಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು.ಮಕ್ಕಳನ್ನು ಹೊರಸಂಚಾರಕ್ಕೆ ಕರೆದೊಯ್ಯುವ ವಿಚಾರವಾಗಿ ಶಿಕ್ಷಣ ಇಲಾಖೆಯಿಂದ ಯಾವುದೆ ಅನುಮತಿ ಪಡೆಯದೆ ಇರುವ ಕಾರಣ ಕ್ಷೇತ್ರ ಶಿಕ್ಷಣಾಧಿಕಾರಿಯಾದ ನಟರಾಜು ಅವರು ಕರ್ನಾಟಕ ಸಿವಿಲ್ ಸೇವಾ (ವರ್ಗಿಕರಣ ನಿಯಂತ್ರಣ ಮತ್ತು ಮೇಲ್ಮನವಿ) ನಿಯಾಮವಳಿಗಳು 1957 ರ ನಿಯಮ 10 (1) ಎ ರನ್ವಯ ಮುಖ್ಯಶಿಕ್ಷಕ ಹನುಮಂತರಾಯಪ್ಪ ಹಾಗೂ ಅನಂತರಾಮು ಅವರನ್ನು ಶಿಕ್ಷಣ ಇಲಾಖೆಯ ನಿಯಮಾನುಸಾರ ಸಸ್ಪೆಂಡ್ ಮಾಡಿ ಆದೇಶ ಹೊರಡಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಕೊರಟಗೆರೆ…..