ಚಾಮರಾಜನಗರ –
ಹಾರ್ಟ್ ಅಟ್ಯಾಕ್ ನಿಂದ 3ನೇ ತರಗತಿ ವಿದ್ಯಾರ್ಥಿ ನಿ ಯೊಬ್ಬರು ಮೃತಪಟ್ಟ ಘಟನೆ ಚಾಮರಾಜನಗರದಲ್ಲಿ ನಡೆದಿದೆ ಹೌದು ತರಗತಿಯಲ್ಲಿ ಶಿಕ್ಷಕಿಗೆ ನೋಟ್ಸ್ ತೋರಿಸುವ ವೇಳೆ ಏಕಾಏಕಿ ಕುಸಿದು ಬಿದ್ದು 3ನೇ ತರಗತಿ ವಿಧ್ಯಾರ್ಥಿನಿ ಸಾವನಪ್ಪಿದ್ದು ಚಾಮರಾಜನಗರದ ಸೇಂಟ್ ಫ್ರಾನ್ಸಿಸ್ ಶಾಲೆಯಲ್ಲಿ ನಡೆದಿದೆ.
ಚಾಮರಾಜನಗರ ತಾಲೂಕಿನ ಬದನಗುಪ್ಪೆ ಗ್ರಾಮದ ನಿವಾಸಿ ಲಿಂಗರಾಜು, ಶ್ರುತಿ ದಂಪತಿಯ ಏಕೈಕ ಪುತ್ರಿ ತೇಜಸ್ವಿನಿ ಎಂದು ಗುರುತಿಸಲಾಗಿದೆ.ಕ್ಲಾಸ್ನಲ್ಲಿ ಶಿಕ್ಷಕಿಗೆ ನೋಟ್ಸ್ ತೋರಿಸಲು ನಿಂತಾಗ ಏಕಾಏಕಿ ಕುಸಿದು ಬಿದ್ದಿದ್ದಾಳೆ,ಕೂಡಲೇ ಶಿಕ್ಷಕರು ಆಕೆಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಅಷ್ಟರಲ್ಲೇ ಆಕೆ ಸಾವನಪ್ಪಿದ್ದಾಳೆ.
ಇನ್ನು ತೇಜಸ್ವಿನಿ ಹೃದಯಾಘಾತದಿಂದ ಮೃತಪಟ್ಟಿರು ವುದಾಗಿ ವೈದ್ಯರು ಖಚಿತಪಡಿಸಿದ್ದಾರೆ. ಏಕೈಕ ಪುತ್ರಿ ಯನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ನೋಡುಗರ ದುಃಖ ಮಡುಗಟ್ಟಿದ್ದು, ಶಾಲೆಯಲ್ಲಿ ಶೋಕ ಆವರಿಸಿದೆ.
ಸುದ್ದಿ ಸಂತೆ ನ್ಯೂಸ್ ಚಾಮರಾಜನಗರ…..