ಬೆಂಗಳೂರು –
ರಾಜ್ಯ ಬಿಜೆಪಿ ಪಕ್ಷವು ಜಿಲ್ಲೆಗಳಿಗೆ ಜಿಲ್ಲಾಧ್ಯಕ್ಷರನ್ನು ನೇಮಕ ಮಾಡಿದೆ ಹೌದು 23 ಜಿಲ್ಲೆಗಳಿಗೆ ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ ಮಾಡಲಾಗಿದ್ದು ಈ ಒಂದು ಕುರಿತು ಆದೇಶ ವನ್ನು ಕೂಡಾ ಮಾಡಲಾಗಿದೆ.ನೂತನ ಜಿಲ್ಲಾಧ್ಯಕ್ಷರನ್ನು ಆಯ್ಕೆ ಮಾಡಿ ಬಿಜೆಪಿ ಪಟ್ಟಿ ಬಿಡುಗಡೆ ಮಾಡಿದೆ. ಕೆಲ ಜಿಲ್ಲೆಗಳಿಗೆ ಹೊಸ ಮುಖಗಳಿಗೆ ಮಣೆ ಹಾಕಿದ್ದರೆ, ಇನ್ನು ಕೆಲ ಜಿಲ್ಲೆಗಳಿಗೆ ಹಳೇಬರನ್ನೇ ಮುಂದು ವರಿಸಲಾಗಿದೆ. ಇನ್ನು ಕೆಲ ಜಿಲ್ಲೆಗಳಿಗೆ ಅಧ್ಯಕ್ಷರ ಆಯ್ಕೆ ಮಾಡಲಾಗಿಲ್ಲ.
ಈ ನೂತನ ಜಿಲ್ಲಾಧ್ಯಕ್ಷರುಗಳು ಪಕ್ಷದ ಸಂಘಟನೆ ಯನ್ನು ತಳಮಟ್ಟದಲ್ಲಿ ಸಧೃಢಗೊಳಿಸುತ್ತಾ, ಮುಂಬರುವ ಎಲ್ಲಾ ರೀತಿಯ ಸವಾಲುಗಳನ್ನು ಎದುರಿಸಲು ಶಕ್ತಿ ತುಂಬುತ್ತಾ ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಶ್ರಮಿಸಬೇಕು ಎಂದು ಬಿಜೆಪಿ ಕಿವಿ ಮಾತು ಹೇಳಿದೆ. ಇನ್ನು ವಿಜಯೇಂದ್ರ ತಮ್ಮ ಆಪ್ತರಿಗೆ ಮಣೆ ಹಾಕಿದ್ದಾರೆ ಎನ್ನುವ ಆರೋಪ ಪಕ್ಷದಲ್ಲೇ ಕೇಳಿ ಬಂದಿದೆ
ಶಿವಮೊಗ್ಗ, ಕಲಬುರಗಿ ಗ್ರಾಮಾಂತರ, ಯಾದಗಿರಿ, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗೆ ಹೊಸ ಅಧ್ಯಕ್ಷರನ್ನ ಆಯ್ಕೆ ಮಾಡಲಾಗಿದೆ. ಇನ್ನು ಮೈಸೂರು, ಚಾಮರಾಜನಗರ, ದಕ್ಷಿಣ ಕನ್ನಡ, ಚಿಕ್ಕ ಮಗಳೂರು, ಉತ್ತರ ಕನ್ನಡ, ಹುಬ್ಬಳ್ಳಿ- ಧಾರವಾಡ, ಧಾರವಾಡ ಗ್ರಾಮಾಂತರ, ಬೆಳಗಾವಿ, ಬೆಳಗಾವಿ ಗ್ರಾಮಾಂತರ, ಚಿಕ್ಕೋಡಿ, ಬೀದರ್, ಕಲಬುರಗಿ, ಬಳ್ಳಾರಿ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ ಜಿಲ್ಲೆಗೆ ಮರು ನೇಮಕ ಮಾಡಲಾ ಗಿದೆ
ಇನ್ನು 23 ಜಿಲ್ಲೆಗಳಿಗೆ ಅಧ್ಯಕ್ಷರನ್ನು ಆಯ್ಕೆ ಮಾಡಲಾ ಗಿದ್ದು, 16 ಜಿಲ್ಲೆಗಳ ಅಧ್ಯಕ್ಷರ ಆಯ್ಕೆ ಮಾಡಬೇಕಿದೆ. ಮೈಸೂರು ಗ್ರಾಮಾಂತರ, ಮಂಡ್ಯ, ಹಾಸನ, ಕೊಡಗು, ಉಡುಪಿ, ಹಾವೇರಿ, ಗದಗ, ಬಾಗಲಕೋಟೆ, ವಿಜಯ ಪುರ, ರಾಯಚೂರು, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಧುಗಿರಿ, ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಅಧ್ಯಕ್ಷರನ್ನು ನೇಮಕ ಮಾಡ ಬೇಕಿದೆ. ಆಯ್ಕೆಯಲ್ಲಿ ಕೆಲ ಗೊಂದಲ ಏರ್ಪಟ್ಟಿದ್ದರಿಂದ ಸದ್ಯಕ್ಕೆ ಯಾವುದೇ ನೇಮಕ ಮಾಡಿಲ್ಲ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು……