ಮಂಡ್ಯ –
ರಾಜ್ಯದ ಸರ್ಕಾರಿ ಶಾಲಾ ಆವರಣದಲ್ಲೇ ಬೆಚ್ಚಿಬೀಳುವ ಘಟನೆ – ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು…..
ಸರ್ಕಾರಿ ಶಾಲಾ ಆವರಣದಲ್ಲೇ 8 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದ ಘಟನೆ ಮಂಡ್ಯ ದಲ್ಲಿ ನಡೆದಿದೆ.ಬಾಲಕಿಯನ್ನು ಬೆದರಿಸಿ ಸರ್ಕಾರಿ ಶಾಲಾ ಅವರಣದಲ್ಲೇ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿದ್ದು ಈ ಒಂದು ಭೀಕರ ಘಟನೆ ಮಂಡ್ಯದಲ್ಲಿ ನಡೆದಿದೆ.ನಗರದ ಹೊರ ವಲಯದಲ್ಲಿ ಕೇಕ್ ಕೊಡಿಸಿ, ಚಾಕು ಹಾಕುವುದಾಗಿ ಬೆದರಿಸಿ ಸರ್ಕಾರಿ ಶಾಲಾ ಆವರಣದಲ್ಲೇ 8 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿದೆ.
ಹಾಡುಹಗಲೇ ಮೂವರು ಕಾಮುಕರು ಬಾಲಕಿ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಜ.31ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.ಇನ್ನು ತನ್ನ ಮೇಲಾದ ದುಷ್ಕೃತ್ಯವನ್ನು ಬಾಲಕಿ ಯಾರೊಂದಿಗೆ ಹೇಳಿಕೊಂಡಿರಲಿಲ್ಲ ಬಾಲಕಿ ಋತುಮತಿಯಾಗಿ ಎರಡು ದಿನ ಕಳೆದರೂ ಆಕೆಗೆ ಹೊಟ್ಟೆ ನೊವು, ರಕ್ತಸ್ರಾವ ನಿಂತಿರಲಿಲ್ಲ.ಇದರಿಂದ ಅನುಮಾನಗೊಂಡ ಬಾಲಕಿ ಚಿಕ್ಕಮ್ಮ ಬಂದು ವಿಚಾರಿಸಿದಾಗ ಬಾಲಕಿ ನಡೆದ ಘಟನೆ ವಿವರಿಸಿದ್ದಾಳೆ. ಚಿಕ್ಕಮ್ಮನ ಬಳಿ ಕಾಮಾಂಧರ ದುಷ್ಕೃತ್ಯದ ಬಗ್ಗೆ ಬಾಲಕಿ ಬಾಯಿಬಿಟ್ಟಿದ್ದಾಳೆ.
ಸದ್ಯ ಅಸ್ವಸ್ಥ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಆಸ್ಪತ್ರೆಗೆ ಬಂದ ಪೊಲೀಸರು ಬಾಲಕಿಯ ಆರೋಗ್ಯ ವಿಚಾರಣೆ ನಡೆಸಿದ್ದು ಮಾತ್ರ ವಲ್ಲದೇ ನಂತರ ಬಾಲಕಿಯ ಆರೋಗ್ಯದ ಸ್ಥಿತಿಯ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದಿದ್ದು ಪ್ರಕರಣ ದಾಖಲಿಸಿ ಕೊಂಡು ತನಿಖೆ ನಡೆಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಮಂಡ್ಯ…..