ಲಕ್ಷ್ಮೇಶ್ವರ –
ಗದಗ ಜಿಲ್ಲೆಯ ಹಲವು ಶಿಕ್ಷಕರು ರಾಜ್ಯಮಟ್ಟದ ‘ಗ್ರಾಮೀಣ ಶಿಕ್ಷಕ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಹೌದು ತಾಲ್ಲೂಕಿನ ದೊಡ್ಡೂರ ತಾಂಡಾ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಹಾಗೂ ದೊಡ್ಡೂರ ಕ್ಲಸ್ಟರ್ ಪ್ರಭಾರ ಸಿಆರ್‌ಪಿ ಶಿವಾನಂದ ದೇವೇಂದ್ರಪ್ಪ ಅಸುಂಡಿ ಅವರು ರಾಜ್ಯಮಟ್ಟದ ‘ಗ್ರಾಮೀಣ ಶಿಕ್ಷಕ ರತ್ನ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.
ಕರ್ನಾಟಕ ರಾಜ್ಯ ಗ್ರಾಮೀಣ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹುಬ್ಬಳ್ಳಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಘಟಕ ಮತ್ತು ನೆಲಮಂಗಲ ತಾಲ್ಲೂಕು ಘಟಕ ಸಹ ಯೋಗದಲ್ಲಿ ರಾಜ್ಯಮಟ್ಟದ ಶೈಕ್ಷಣಿಕ ಕಾರ್ಯಾಗಾರದ ವಾರ್ಷಿಕೋತ್ಸವದ ಅಂಗವಾಗಿ ಪ್ರಶಸ್ತಿ ನೀಡಲಾಗು ತ್ತದೆ.ಫೆಬ್ರುವರಿ 8ರಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಪವಾಡ ಬಸವಣ್ಣ ದೇವರ ಮಠದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ.
ಸುದ್ದಿ ಸಂತೆ ನ್ಯೂಸ್ ಲಕ್ಷ್ಮೇಶ್ವರ…..