ಬೆಂಗಳೂರು –
ಮತ್ತೊಂದು ಬಜೆಟ್ ಮಂಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಿದ್ದರಾಗುತ್ತಿದ್ದು ಈ ಒಂದು ಬಜೆಟ್ ನಲ್ಲಿ ರಾಜ್ಯದ ಸರ್ಕಾರಿ ನೌಕರರು ಹಲವು ನಿರೀಕ್ಷೆ ಗಳನ್ನು ಇಟ್ಟುಕೊಂಂಡಿದ್ದಾರೆ ಹೌದು ಬಜೆಟ್‌ನಲ್ಲಿ ಘೋಷಣೆ ನಿರೀಕ್ಷೆಗಳನ್ನು ಹೊಂದಿದ್ದು ಪ್ರಮುಖ ವಾಗಿ ಪ್ರಣಾಳಿಕೆಯಂತೆ ಕರ್ತವ್ಯ ನಿರತ ಸರ್ಕಾರಿ ನೌಕರ ಅಕಾಲಿಕ ಮರಣ ಹೊಂದಿದಲ್ಲಿ ಕೋಟಿ ರೂ. ಗಳ ಪರಿಹಾರ ಮೊತ್ತವನ್ನು ನೀಡುವ ಸಂಬಂಧದ ವಿಚಾರ ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ಬಂದಿದೆ.
ಸಿ. ಎಸ್. ಷಡಾಕ್ಷರಿ ಅವರು, “ನೌಕರರ ಹಬ್ಬದ ಮುಂಗಡ 25 ರಿಂದ 50 ಸಾವಿರಕ್ಕೆ ಹೆಚ್ಚಿಸುವ ಕಾರ್ಯ ಈ ಬಜೆಟ್‌ನಲ್ಲಿ ಅನುಮೋದನೆ ಆಗುತ್ತದೆ” ಎಂದಿದ್ದಾರೆ
“ಫೆಬ್ರುವರಿ 20ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾಯಿತ ನಿರ್ದೇಶಕರು ಮತ್ತು ಪದಾಧಿಕಾರಿಗಳ ಸಮಾಗಮ ಹಾಗೂ ಅಭಿನಂದನಾ ಕಾರ್ಯಕ್ರಮದಲ್ಲಿ ರಾಜ್ಯ ಸರ್ಕಾರದ ಗೌರವಾನ್ವಿತ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಭಾಗವಹಿಸಲಿದ್ದು ಈ ಕಾರ್ಯಕ್ರಮದಲ್ಲಿ ಎನ್‌ಪಿಎಸ್ ನಿಂದ ಒಪಿಎಸ್, ಆರೋಗ್ಯ ಸಂಜೀವಿನಿ ಯೋಜನೆಯ ಜಾರಿ ಸಂಬಂಧ ದಾವಣಗೆರೆ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ನಿರ್ಣಯಿಸಿದಂತೆ ನಿರ್ಣಯ ಕೈಗೊಳ್ಳಲಾಗು ವುದು” ಎಂದು ಸಿ. ಎಸ್. ಷಡಾಕ್ಷರಿ ಮಾಹಿತಿ ನೀಡಿದರು.
ಕರ್ನಾಟಕ ಕಾಂಗ್ರೆಸ್ 2023ರ ವಿಧಾನಸಭೆ ಚುನಾವಣೆ ಯ ಪ್ರಣಾಳಿಕೆಯಲ್ಲಿಯೇ ಸರ್ಕಾರಿ ನೌಕರರ ಬೇಡಿಕೆ ಯಾದ ಹೊಸ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಗೊಳಿಸಿ ಹಳೆ ಪಿಂಚಣಿ ವ್ಯವಸ್ಥೆ (ಒಪಿಎಸ್) ಮರು ಜಾರಿಗೊಳಿಸುತ್ತೇವೆ ಎಂದು ಭರವಸೆ ನೀಡಿತ್ತು. ಆದರೆ ಈ ಬೇಡಿಕೆಯನ್ನು ಇನ್ನೂ ಸಹ ಈಡೇರಿಸಿಲ್ಲ. ರಾಜ್ಯ ಎನ್‌ಪಿಎಸ್ ನೌಕರರ ಸಂಘ ಈ ಕುರಿತು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಪ್ರತಿಭಟನೆಯನ್ನು ಸಹ ನಡೆಸಿತ್ತು.
ರಾಜ್ಯ ಸರ್ಕಾರ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡುವ ಸಾಧ್ಯತೆಗಳ ಕುರಿತು ಪರಿಶೀಲಿಸಲ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿದೆ. ದಿನಾಂಕ 16/8/2024ರಲ್ಲಿ ಈ ಸಮಿತಿಯನ್ನು ಪುನರ್ ರಚಿಸಿ ಆದೇಶಿಸಲಾಗಿದೆ. ಸಮಿತಿ ಇನ್ನೂ ಸರ್ಕಾರಕ್ಕೆ ವರದಿ ಸಲ್ಲಿಕೆ ಮಾಡಿಲ್ಲ. ಅಲ್ಲದೇ ಸಮಿತಿ ವರದಿಯನ್ನು ಸಲ್ಲಿಕೆ ಮಾಡಲು ಸರ್ಕಾರ ಸಹ ಕಾಲಮಿತಿಯನ್ನು ನಿಗದಿ ಮಾಡಿಲ್ಲ ಹೀಗಾಗಿ ಈ ಒಂದು ಮಹತ್ವದ ಯೋಜನೆ ನಿರೀಕ್ಷೆ ಯಲ್ಲಿ ರಾಜ್ಯದ ಸಮಸ್ತ ಸರ್ಕಾರಿ ನೌಕರರು ಇದ್ದಾರೆ
ಇದರೊಂದಿಗೆ ಇನ್ನೂ ಹಲವಾರು ಮಹತ್ವದ ಹೊಸ ಯೋಜನೆ ಗಳನ್ನು ರಾಜ್ಯದ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಒಂದು ಬಜೆಟ್ ನಲ್ಲಿ ಘೋಷಣೆ ಮಾಡ್ತಾರೆ ಎಂಬ ಮಹತ್ವದ ನಿರೀಕ್ಷೆ ಯಲ್ಲಿ ಇದ್ದಾರೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು .….