ಬೆಂಗಳೂರು –
7ನೇ ರಾಜ್ಯ ವೇತನ ಆಯೋಗದ ವರದಿ ಜಾರಿಯಾ ದರೂ ಸಹ ಕರ್ನಾಟಕದ ಸರ್ಕಾರಿ ನೌಕರರು ರಾಜ್ಯದ ಕಾಂಗ್ರೆಸ್ ಸರ್ಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದ್ದಾರೆ. ಈಗ ಸರ್ಕಾರಿ ನೌಕರರ ಸಂಘ ಫೆಬ್ರವರಿ 20ರಂದು ಬೃಹತ್ ಸಮಾವೇಶವೊಂದನ್ನು ಆಯೋಜನೆ ಮಾಡಿದೆ.ಈ ಸಮಾವೇಶದಲ್ಲಿ ಎರಡು ಪ್ರಮುಖ ಬೇಡಿಕೆ ಗಳನ್ನು ಈಡೇರಿಸುವಂತೆ ಅವರು ಸರ್ಕಾರವನ್ನು ಒತ್ತಾಯಿಸಲಿದ್ದಾರೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ದಿನಾಂಕ 20-02-2025ರ ಗುರುವಾರ ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಸರ್ಕಾರಿ ನೌಕರರ ಬೃಹತ್ ಸಮಾವೇಶವನ್ನು ಆಯೋಜನೆ ಮಾಡಿದೆ. ಕೆಲವು ದಿನಗಳ ಹಿಂದೆ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಗಳು ಪೂರ್ಣಗೊಂಡ ಹಿನ್ನಲೆ ಯಲ್ಲಿ ಈ ಸಮಾವೇಶ ಆಯೋಜನೆ ಮಾಡಲಾಗಿದೆ.
‘ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಬೆಂಗಳೂರು ನಗರ ರಾಜ್ಯ ಪರಿಷತ್ ಸದಸ್ಯರ ಹಾಗೂ ಎಲ್ಲಾ ಜಿಲ್ಲಾ-ತಾಲ್ಲೂಕು ಶಾಖೆಗಳ ನಿರ್ದೇಶಕರು-ಪದಾಧಿಕಾರಿಗಳ ಸಮಾವೇಶ’ ಇದಾಗಿದೆ. ಈ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಪಾಲ್ಗೊಳ್ಳಲಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..