ಬೆಂಗಳೂರು –
ಶಾಲಾ ಮಕ್ಕಳಿಗೆ ಮೊಟ್ಟೆ ವಿತರಣೆ ಬಗ್ಗೆ ಸಚಿವ ಮಧು ಬಂಗಾರಪ್ಪ ಮುಖ್ಯ ಮಾಹಿತಿ ನೀಡಿದ್ದು ರಾಜ್ಯದಲ್ಲಿ ಕೋಳಿ ಜ್ವರ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸರ್ಕಾರ ಎಲ್ಲಾ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಆರೋಗ್ಯ ಇಲಾಖೆ ನೀಡುವ ವರದಿ ಆಧರಿಸಿ ಮೊಟ್ಟೆ ವಿತರಣೆ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.ಈ ಹಿಂದೆಯೂ ಕೋಳಿ ಜ್ವರ ಬಂದಾಗ ಸರ್ಕಾರ ಮೊಟ್ಟೆ ವಿತರಣೆ ಮುಂದುವರೆಸಿತ್ತು ಎಂದು ಉಲ್ಲೇಖಿಸಿದ ಸಚಿವರು, ಆರೋಗ್ಯ ಇಲಾಖೆ ವರದಿ ಆಧರಿಸಿ ಶಾಲೆ ಗಳಲ್ಲಿ ಮೊಟ್ಟೆ ವಿತರಿಸಲಾಗುವುದು ಎಂದರು.
ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ತಾಂತ್ರಿಕ ಸಮಸ್ಯೆ ಗಳಿದ್ದು ಕನ್ನಡ ಒಳಿತಿಗೆ ಅಗತ್ಯವಿರುವ ಕ್ರಮವನ್ನು ಸರ್ಕಾರ ಕೈಗೊಳ್ಳುತ್ತದೆ ಎಂದಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..