ಬೆಂಗಳೂರು –
ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಶಾಸಕರ ಪ್ರತಿಭಟನೆ – ರಾಜ್ಯಾಧ್ಯಕ್ಷರೊಂದಗೆ ಪ್ರತಿಭಟನೆಯಲ್ಲಿ ಪಾಲ್ಗೊಂಡು ರಾಜ್ಯ ಸರ್ಕಾರದ ವಿರುದ್ದ ಗುಡುಗಿದ ಶಾಸಕರಾದ ಮಹೇಶ್ ಟೆಂಗಿನಕಾಯಿ,ಅರವಿಂದ ಬೆಲ್ಲದ್,ಎಮ್ ಆರ್ ಪಾಟೀಲ್
ಅಧಿವೇಶನ ಆರಂಭವಾಗುತ್ತಿರುವ ಬೆನ್ನಲ್ಲೇ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಪಕ್ಷದವರು ಮತ್ತೆ ಪ್ರತಿಭಟನೆ ಮಾಡಿದ್ರು.ಹೌದು ರಾಜ್ಯಪಾಲರ ಸಂವಿಧಾನದತ್ತ ಅಧಿಕಾರವನ್ನು ಮೊಟಕುಗೊಳಿಸುತ್ತಿ ರುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಡೆಯನ್ನು ಖಂಡಿಸಿ ಬೆಂಗಳೂರಿನ ವಿಧಾನಸೌಧದ ಮುಂಭಾಗದಲ್ಲಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಯಡಿಯೂರಪ್ಪ, ಪ್ರತಿಪಕ್ಷ ನಾಯಕರಾದ ಆರ್. ಅಶೋಕ್, ಪರಿಷತ್ ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಪ್ರತಿಭಟನೆಯನ್ನು ಮಾಡಲಾ ಯಿತು
ಶಾಸಕರ ಭವನದಿಂದ ಹೊರಟ ಪ್ರತಿಭಟನೆ ವಿಧಾನ ಸೌಧದವರೆಗೆ ಪಾದಯಾತ್ರೆ ನಡೆಯಿತು ಇದೇ ವೇಳೆ ರಾಜ್ಯ ಸರ್ಕಾರದ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶವನ್ನು ವ್ಯಕ್ತಪಡಿಸಲಾಯಿತು.ಬಿಜೆಪಿ ಪಕ್ಷದ ರಾಜ್ಯ ಮುಖಂಡರೊಂದಿಗೆ ಪ್ರತಿಪಕ್ಷ ಉಪನಾಯಕ ರಾದ ಅರವಿಂದ್ ಬೆಲ್ಲದ್,ಶಾಸಕರಾದ ಎಮ್ ಆರ್ ಪಾಟೀಲ್.ಮಹೇಶ್ ಟೆಂಗಿನಕಾಯಿ.ಸೇರಿದಂತೆ ಮಾಜಿ ಸಚಿವರು, ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಶಾಸಕರು, ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದು ಪ್ರತಿಭಟನೆಗೆ ಸಾಥ್ ನೀಡಿದ್ರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..