ಕನಕಪುರ –
ಕರ್ತವ್ಯ ನಿರತ ಅರಣ್ಯ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಮೆರೆದಿರುವ ವ್ಯಕ್ತಿಗಳ ವಿರುದ್ಧ ಕಾನೂನಿನಡಿ ಸೂಕ್ತ ಕ್ರಮಕೈಗೊಳ್ಳಬೇ ಕೆಂದು ಆಗ್ರಹಿಸಿ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಪದಾಧಿಕಾರಿಗಳು, ತಹಶೀಲ್ದಾರ್ ಮಂಜುನಾಥ್ ಅವರಿಗೆ ಮನವಿ ಪತ್ರ ಸಲ್ಲಿಸಿದರು.
ಸಾತನೂರು ಹೋಬಳಿ ಹಲಸಿನ ಮರದೊಡ್ಡಿ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ಅರಣ್ಯ ಸಿಬ್ಬಂದಿ ಹಾಗೂ ಅವರನ್ನು ಬಿಡಿಸಲು ಬಂದ ಪೊಲೀಸರ ಮೇಲೆ ಹಲ್ಲೆ ನಡೆಸಿ ದೌರ್ಜನ್ಯ ಮೆರೆದಿರುವುದನ್ನು ಖಂಡಿಸಿ, ನೌಕರ ಸಂಘದ ಅಧ್ಯಕ್ಷ ನಂದೀಶ್ ನೇತೃತ್ವದಲ್ಲಿ ಮನವಿ ಪತ್ರ ಸಲ್ಲಿಸಲಾಯಿತು.
ಸರ್ಕಾರಿ ಕೆಲಸವನ್ನು ಮುಕ್ತವಾಗಿ ನಿರ್ವಹಿಸಬೇಕಿದೆ. ಅಂತಹ ಸಂದರ್ಭದಲ್ಲಿ ಸಾರ್ವಜನಿಕರ ಮೇಲೆ ಹಲ್ಲೆ ಮಾಡುವುದು, ಬೆದರಿಕೆ ಹಾಕುವುದು, ದೌರ್ಜನ್ಯ ನಡೆಸುವುದು ಖಂಡನೀಯ ಯಾವುದೇ ಇಲಾಖೆ ಅಧಿಕಾರಿಗಳು, ನೌಕರರು ಸಿಬ್ಬಂದಿ ಮುಕ್ತವಾಗಿ ಕೆಲಸ ಮಾಡಲು ಸಾರ್ವಜನಿಕರು ಸಹಕರಿಸ ಬೇಕು. ದೌರ್ಜನ್ಯ ನಡೆಸುವುದು, ಹಲ್ಲೆ ನಡೆಸುವುದು ಸರಿಯಲ್ಲ. ತಾಲ್ಲೂಕು ಆಡಳಿತ ಕ್ರಮ ವಹಿಸಬೇಕೆಂದು ನೌಕರರು ಒತ್ತಾಯಿಸಿದರು.
ಸಂಘದ ಕಾರ್ಯದರ್ಶಿ ಪ್ರಸನ್ನ ಕುಮಾರ್, ವಿಭಾಗೀಯ ಉಪಾಧ್ಯಕ್ಷ ಎಚ್,ಬಿ.ಶಿವಲಿಂಗೇಗೌಡ, ತಾಲ್ಲೂಕು ಘಟಕದ ಎಲ್ಲ ನಿರ್ದೇಶಕರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿ ಸಂತೆ ನ್ಯೂಸ್ ಕನಕಪುರ…..