ಹುಬ್ಬಳ್ಳಿ –
ಪದೇ ಪದೇ ಜೈನ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಐತಿಹಾಸಿಕ ಹುಬ್ಬಳ್ಳಿಯ ವರೂರಿನ ನವಗ್ರಹ ತೀರ್ಥ ಕ್ಷೇತ್ರದ ಗುಣಧರ ನಂದಿ ಮಹಾರಾಜರು ಬೇಸರ ವ್ಯಕ್ತಪಡಿಸಿದ್ದಾರೆ.ವರೂರಿನ ತೀರ್ಥ ಕ್ಷೇತ್ರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರವು ಜೈನ ಸಮಾಜಕ್ಕೆ ಅನ್ಯಾಯ ಮಾಡುತ್ತಿದೆ ಎನ್ನುತ್ತಾ ಕಣ್ಣೀರಾಕಿದರು ರಾಷ್ಟ್ರಸಂತ ಗುಣಧರ ನಂದಿ ಮಹಾರಾಜರು
ಜೈನ್ ಧರ್ಮದ ಬಗ್ಗೆ ನಿರ್ಲಕ್ಷ್ಯ ಮುಂದುವರಿದರೇ ಸಲ್ಲೇಖನ ವೃತ ಮಾಡಲಾಗುತ್ತದೆ.ಜೈನ ಸಮಾಜದ ನಿಗಮ ಮಂಡಳಿಗಾಗಿ ಕಣ್ಣೀರು ಹಾಕಿದರು ಜೈನ ಮುನಿ ಜೈನ್ ಧರ್ಮದ ಬಗ್ಗೆ ರಾಜ್ಯ ಸರ್ಕಾರದ ದಿವ್ಯ ನಿರ್ಲಕ್ಷ್ಯ ಖಂಡಿಸಿ ಹೋರಾಟ ಮಾಡಲಾಗುತ್ತದೆ ವಿವಿಧ ಹಂತ ದಲ್ಲಿ ಈ ಒಂದು ಕಾರ್ಯಕ್ರಮ ನಡೆಯಲಿದೆ ಎಂದರು
ಕಣ್ಣೀರು ಹಾಕುವ ಮೂಲಕ ಅಸಮಾಧಾನ ವ್ಯಕ್ತಪ ಡಿಸಿದರು ರಾಷ್ಟ್ರಸಂತ.ಜೈನ ಅಭಿವೃದ್ಧಿ ನಿಗಮ-ಮಂಡಳಿ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರವನ್ನು ಆಗ್ರಹಿಸಿ ಜೈನ ಸಮಾಜದ ಬಾಂಧವರಿಂದ ನಾಡಿದ್ದು ಬೆಂಗಳೂರು ಚಲೋ ನಡೆಯಲಿದೆ.ಬೆಂಗಳೂರು ಚಲೋ ಕರೆ ನೀಡಿದರು ವರೂರು ನವ್ರಗ್ರಹ ತೀರ್ಥಕ್ಷೇತ್ರದ ರಾಷ್ಟ್ರಸಂತ ಯುವ ಆಚಾರ್ಯ ಶ್ರೀ ಗುಣಧರನಂದಿ ಮಹಾರಾಜರು,
ಸರ್ಕಾರಕ್ಕೆ ಹಲವಾರು ಬಾರಿ ಮನವಿ ಮಾಡಿದರೂ ನಿರ್ಲಕ್ಷ್ಯ ತೋರುತ್ತಿದ್ದಾರೆ.ಜೈನ ಅಭಿವೃದ್ಧಿ ನಿಗಮ- ಮಂಡಳಿ ಸ್ಥಾಪನೆ ಸೇರಿದಂತೆ ಒಟ್ಟು 7 ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಭರವಸೆ ನೀಡಿತ್ತು.ಆದ್ರೆ, ಇದುವರೆಗೆ ಮೂರು ಬೇಡಿಕೆಗಳು ಮಾತ್ರ ಈಡೇರಿವೆ.
ನಿಗಮ-ಮಂಡಳಿ ಸೇರಿದಂತೆ ಇನ್ನೂ ನಾಲ್ಕು ಬೇಡಿಕೆ ಗಳು ಬಾಕಿ ಉಳಿದಿವೆ.ಬಜೆಟ್ ಅಧಿವೇಶನದ ಸಂದರ್ಭ ದಲ್ಲಿ ನಿಗಮ-ಮಂಡಳಿ ರಚನೆಯ ಬೇಡಿಕೆ ಯನ್ನು ಸರ್ಕಾರ ಈಡೇರಿಸುತ್ತದೆ ಎಂದು ನಿರೀಕ್ಷಿಸಲಾ ಗಿತ್ತು, ಆದ್ರೆ, ನಿರೀಕ್ಷೆ ಹುಸಿಯಾಗಿವೆ ಎಂದರು.ಬುಧವಾರ ಬೆಳಿಗ್ಗೆ ಸಚಿವ ಜಮೀರ ಅಹ್ಮದ್ ಅವರನ್ನು ಭೇಟಿ ಯಾಗಿ, ನಿಗಮ- ಮಂಡಳಿ ರಚನೆಗೆ ಮನವಿ ನೀಡ ಲಾಗುತ್ತದೆ.
ಎಲ್ಲಾ ಸಚಿವರನ್ನು ಭೇಟಿಯಾಗಿ, ಸಮಾಜದ ಬೇಡಿಕೆ ಈಡೇರಿಕೆಗೆ ಮನವಿ ಸಲ್ಲಿಸಲಾಗುವುದು.ಸರ್ಕಾರ ಬೇಡಿಕೆ ಈಡೇರಿಕೆಗೆ ನಿರ್ಲಕ್ಷ್ಯ ಮಾಡಿದರೆ, ಜೂ.8ರಂದು ಅಥಣಿ ತಾಲೂಕಿನ ಐನಾಪೂರದಲ್ಲಿ ಸಮಾಜದ ಲಕ್ಷಾಂ ತರ ಜನರನ್ನು ಸೇರಿಸಿ ಸಮಾವೇಶ ಆಯೋಜಿಸಲಾಗು ವುದು
ಸರ್ಕಾರ ನಿರ್ಲಕ್ಷ್ಯ ಮುಂದುವರೆಸಿದರೆ ಬೆಂಗಳೂರಿನ ವಿಧಾನಸೌಧದ ಎದುರು ಅನ್ನ, ನೀರು ತ್ಯಜಿಸುವ ಮೂಲಕ ಸಲ್ಲೇಖನ ವೃತ ಕೈಗೊಳ್ಳುವುದಾಗಿ ಶ್ರೀ ಗುಣಧರನಂದಿ ಮಹಾರಾಜರು ಎಚ್ಚರಿಕೆ ನೀಡಿದರು.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ……