ಬೆಂಗಳೂರು –
ಪದವಿ ಹಾಗೂ ಬಿ.ಇಡಿ ವಿದ್ಯಾರ್ಹತೆ ಹೊಂದಿರುವ ಸುಮಾರು 58 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 6ರಿಂದ 8ನೇ ತರಗತಿ ಬೋಧನೆಯ ಪದವೀಧರ ಶಿಕ್ಷಕ ವೃಂದಕ್ಕೆ ಬಡ್ತಿ ನೀಡುವ ಸಂಬಂಧ 2017ರ ಪ್ರಾಥಮಿಕ ಶಾಲಾ ಶಿಕ್ಷಕರ ವೃಂದ ಮತ್ತು ನೇಮಕಾತಿ ನಿಯಮಗಳಿಗೆ (ಸಿಅಂಡ್ ಆರ್) ಶೀಘ್ರ ತಿದ್ದುಪಡಿ ತರಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.ಮೇಲ್ಮನೆಯಲ್ಲಿ ನಿಯಮ 330ರಡಿ ಕಾಂಗ್ರೆಸ್ ಸದಸ್ಯ ರಾಜೋಜಿಗೌಡ ಅವರು ನೀಡಿದ ಸೂಚನಾ ಪತ್ರಕ್ಕೆ ಬುಧವಾರ ಉತ್ತರ ನೀಡಿದರು.
ಎನ್‌ಸಿಟಿಇಯು ಪ್ರಾಥಮಿಕ ಶಾಲೆಗಳಲ್ಲಿ 1ರಿಂದ 5ನೇ ತರಗತಿ ಶಿಕ್ಷಕರಿಗೆ ಪಿಯುಸಿ, ಟಿಸಿಎಸ್/ಡಿಇಡಿ ಮತ್ತು 6ರಿಂದ 8ನೇ ತರಗತಿ ಬೋಧಿಸುವ ಶಿಕ್ಷಕರಿಗೆ ಪದವಿ ಮತ್ತು ಟಿಸಿಎಸ್/ಡಿಇಡಿ ವಿದ್ಯಾರ್ಹತೆ ನಿಗದಿಪಡಿಸಿ ರುತ್ತದೆ. ಅದರಂತೆ 2027ರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರ ಸಿಅಂಡ್ ಆರ್‌ಗೆ ತಿದ್ದುಪಡಿ ತಂದು ಹೊಸ ನಿಯಮ ರಚಿಸಲಾಗಿದೆ.
ಈಗ ಪದವೀಧರರಾಗಿರುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ 6ರಿಂದ 8ನೇ ತರಗತಿ ಬೋಧನೆಗೆ ಬಡ್ತಿ ನೀಡಲು ನಿಯಮಗಳನ್ನು ತಿದ್ದುಪಡಿ ಮಾಡಬೇಕು. ಇದು ನನ್ನ ಇಲಾಖೆಗೆ ಮಾತ್ರ ಸಂಬಂಧಿಸಿಲ್ಲ, ಆರ್ಥಿಕ ಇಲಾಖೆ ಮತ್ತು ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆಗೂ ಒಳಪಡುತ್ತದೆ ಎಂದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..