ಬೆಳಗಾವಿ –
ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ರೊಬ್ಬರು ಅಮಾನತು ಗೊಂಡಿರುವ ಘಟನೆ ಬೆಳಗಾವಿ ಯಲ್ಲಿ ನಡೆದಿದೆ.ಹೌದು ಕುರಾನ್ ಪುಸ್ತಕ ಕಳ್ಳತನ ಮಾಡಿ ಬೆಂಕಿ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಗ್ರಾಮೀಣ ಠಾಣೆಯ ಸಿಪಿಐ ಮಂಜುನಾಥ್ ಅವರನ್ನು ಕರ್ತವ್ಯಲೋಪದ ಆರೋಪದಡಿಯಲ್ಲಿ ಅಮಾನತು ಗೊಳಿಸಲಾಗಿದೆ.
ಈ ಕುರಿತು ನಗರ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾಧ್ಯಮದವರಿಗೆ ಮಾಹಿತಿ ನೀಡಿದ್ದಾರೆ ಮಂಜುನಾಥ್ ಹಿರೇಮಠ್ ಅವರು ಕರ್ತವ್ಯ ಲೋಪ ಎಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಮುಸ್ಲಿಂ ಮುಖಂಡರು ಮಂಜುನಾಥ್ ಹಿರೇಮಠ್ ಅವರ ಅಮಾನತ್ತಿಗೆ ಆಗ್ರಹಿಸಿದ್ದರು ಎಂದು ಯಡಾ ಮಾರ್ಟಿನ್ ಹೇಳಿದ್ದಾರೆ.
ಸಂತಿ ಬಸ್ತವಾಡ ಗ್ರಾಮದಲ್ಲಿ ಈದ್ಗಾ ಗೋಪುರ ಧ್ವಂಸ ಪ್ರಕರಣದ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಸಿಪಿಐ ನಿರ್ಲಕ್ಷ್ಯ ವಹಿಸಿದ್ದರು ಎಂದು ಮುಸ್ಲಿಂ ನಾಯಕರು ಆರೋಪಿಸಿದ್ದರು. ಚೆನ್ನಮ್ಮನ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಸ್ಲಿಂ ಸಮುದಾಯ ಮುಂದಾಗಿದ್ದರು.
ಸುದ್ದಿ ಸಂತೆ ನ್ಯೂಸ್ ಬೆಳಗಾವಿ…..