ಹಾವೇರಿ –
ಅಡ್ಮಿಶನ್ ಮಾಡಿಕೊಳ್ಳಲು ಲಂಚ ಸ್ವೀಕಾರ ಮಾಡುತ್ತಿದ್ದ ಮುಖ್ಯ ಶಿಕ್ಷಕರೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿ ಯಲ್ಲಿ ನಡೆದಿದೆ ಸವಣೂರು ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕನ ಬಂಧನ ಮಾಡಲಾಗಿದೆ.ಸವಣೂರು ಕರ್ನಾಟಕ ಪಬ್ಲಿಕ್ ಶಾಲೆಯ ಮುಖ್ಯ ಶಿಕ್ಷಕ ಕಲ್ಲಪ್ಪ ಕಾಟೇನಹಳ್ಳಿ ಲೋಕಾ ಯುಕ್ತ ಅಧಿಕಾರಿಗಳು ಬಂಧನ ಮಾಡಿದ್ದಾರೆ.
ಸವಣೂರು ಖಾದರಭಾಗ ಓಣಿಯ ಅಕ್ಬರ್ ಅಬ್ದುಲ್ ಹಮೀದ ಕಂದಿಲವಾಲೆ ದೂರಿನ ಆಧಾರದ ಮೇಲೆ ಲೋಕಾಯುಕ್ತ ದಾಳಿಯನ್ನು ಮಾಡಿದ್ದಾರೆ.ತಮ್ಮ ಎರಡನೇ ಮಗನ ಅಡ್ಮಿಶನ್ ಮಾಡಿಸಲು ಮುಖ್ಯೋಪಾದ್ಯಾಯರ ಮಂಜುನಾಥ ಕಲ್ಲಪ್ಪ ಕಾಟೇನಹಳ್ಳಿ, ಯನ್ನು ಬೇಟಿಯಾಗಿದ್ದ ಅಕ್ಬರ್
ಅಡ್ಮಿಶನ್ ಮಾಡಿಕೊಳ್ಳಲು ರೂ 50.ಸಾವಿರ ಲಂಚದ ಹಣಕ್ಕೆ ಬೇಡಿಕೆ ಇಟ್ಟು 10. ಸಾವಿರ ಲಂಚ ಪಡೆಯುವ ವೇಳೆ ದಾಳಿಯನ್ನು ಮಾಡಲಾಗಿದೆ.ಸವಣೂರು ನಗರದ ಹಾವಣಗಿ ಪ್ಲಾಟ್‌ನಲ್ಲಿರುವ ಶಿಕ್ಷಕನ ಮನೆಯಲ್ಲಿ ಲೋಕಾಯುಕ್ತರು ಯಶಸ್ವಿಯಾಗಿ ಟ್ರ್ಯಾಪ್ ಮಾಡಿದ್ದಾರೆ
ಲೋಕಾಯುಕ್ತ ಅಧಿಕಾರಿಗಳಾದ ಎಮ್ ಎಸ್ ಕೌಲಾಪುರೆ, ಮಧುಸೂದನ ಸಿ, ಮಂಜುನಾಥ ಪಂಡಿತ್, ಬಸವರಾಜ ಹಳಬಣ್ಣನವರ ನೇತೃತ್ವದಲ್ಲಿ ಈ ಒಂದು ದಾಳಿಯಾಗಿದೆ.ಆರೋಪಿತ ಮುಖ್ಯೋಪಾದ್ಯಾಯ ಮಂಜುನಾಥ ಕಲ್ಲಪ್ಪ ಕಾಟೇನಹಳ್ಳಿ, ಯನ್ನು ಬಂಧಿಸಿ ರುವ ಲೋಕಾಯುಕ್ತ ಪೊಲೀಸರು ತನಿಖೆಯನ್ನು ಮಾಡ್ತಾ ಇದ್ದಾರೆ.
ಸುದ್ದಿ ಸಂತೆ ನ್ಯೂಸ್ ಹಾವೇರಿ…..