ಬೆಂಗಳೂರು –
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ (KSRTC) ಸಿಬ್ಬಂದಿಯ ವೇತನ (Salary) ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಕುರಿತಾಗಿ ಮುಂದಿನ ವಾರ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಅವರು ಇಂದು ವಿಧಾನಸೌಧ ಸಭಾಂಗಣದಲ್ಲಿ ಕರಾರಸಾ ನಿಗಮಗಳ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಈ ವಿಷಯ ತಿಳಿಸಿದರು.ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳು ಸಿಎಂರನ್ನು ಭೇಟಯಾಗಿದ್ದರು.
ದಿನಾಂಕ 01.01.2020ರ ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿಯನ್ನು ಪಾವತಿಸಬೇಕು. ದಿನಾಂಕ 01.01.2024ರಿಂದ ಜಾರಿಗೆ ಬರುವಂತೆ ವೇತನ ಪರಿಷ್ಕರಣೆ ಮಾಡಬೇಕು. ದಿನಾಂಕ 01.01.2024 ರಿಂದ ಇಂದಿನವರೆಗಿನ ಹಿಂಬಾಕಿಯನ್ನು ಪಾವತಿಸಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.
ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಕುರಿತಾಗಿ ಸರ್ಕಾರದ ಯಾವುದೇ ಆದೇಶ ಇರುವುದಿಲ್ಲ. ಈ ಹಿನ್ನೆಲೆಯಲ್ಲಿ ಹಿಂಬಾಕಿ ಕುರಿತು ಮುಂದಿನ ವಾರ ಮತ್ತೆ ಜಂಟಿ ಕ್ರಿಯಾ ಸಮಿತಿ ಪದಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಗುವುದು ಎಂದು ಮುಖ್ಯ ಮಂತ್ರಿ ತಿಳಿಸಿದರು.
ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಜಂಟಿ ಕ್ರಿಯಾ ಸಮಿತಿಯ ಪದಾಧಿಕಾರಿಗಳು, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.ಇನ್ನೂ ಈ ಒಂದು ಸಭೆಯೊಂದರಲ್ಲಿ ಏನಾದರೂ ಶುಭ ಸುದ್ದಿ ಸಿಗುತ್ತದೆ ಎಂದುಕೊಂಡಿದ್ದ ರಾಜ್ಯದ ಸಮಸ್ತ ಸಾರಿಗೆ ನೌಕರರು ನಿರಾಸೆಯಾಗಿದ್ದಾರೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..